- Advertisement -
ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ (Online Gambling) ನಿಷೇಧಿಸಿ ರಾಜ್ಯ ಸರ್ಕಾರ (State Government) ಕರ್ನಾಟಕ ಪೊಲೀಸ್ ಕಾಯ್ದೆ- 1963ಕ್ಕೆ ತರಲಾಗಿದ್ದ ತಿದ್ದುಪಡಿಯನ್ನು ಹೈಕೋರ್ಟ್ (High Court) ಆನ್ಲೈನ್ ಗೇಮ್ ಸಂಸ್ಥೆಗಳ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಬಾರದು, ಹಾಗೂ ಅವರ ಚಟುವಟಿಕೆಗಳ ಮೇಲೆ ಆಕ್ಷೇಪ ಮಾಡಬಾರದೆಂದು ನಿರ್ದೇಶನ ನೀಡಿದೆ. ಆನ್ಲೈನ್ ಬೆಟ್ಟಿಂಗ್ ಸಂಬಂಧಿಸಿದಂತೆ ರೂಪಿಸುವ ನಿಯಮಗಳು ಸಂವಿಧಾನ ಬಾಹಿರ ಮತ್ತು ಕ್ರಮಬದ್ಧವಾಗಿಲ್ಲ ಎಂದು ಹೈಕೋರ್ಟ್ ನ ವಿಭಾಗೀಯ ಪೀಠ ಅಭಿಪ್ರಾಯ ಪಟ್ಟಿದೆ. ರಾಜ್ಯ ಸರ್ಕಾರ ತಂದಿರುವ ಆನ್ಲೈನ್ ಬೆಟ್ಟಿಂಗ್ ನಿಷೇಧ ಕುರಿತು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಹೈಕೋರ್ಟ್ ಆನ್ಲೈನ್ ಬೆಟ್ಟಿಂಗ್ ನಿಷೇಧವನ್ನು ರದ್ದುಪಡಿಸಿದೆ.
- Advertisement -