ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ: ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ನಿನ್ನೆ ಹೇಳಿಕೆ ನೀಡಿದ್ದರು. ಈ ಬಗ್ಗೆ ಇಂದಿನ ಚಳಿಗಾಲದ ಅದಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ. ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದಿದ್ದಾರೆ.

ಪುಣೆಯಲ್ಲಿ ಮಾತನಾಡಿದ್ದ ಆದಿತ್ಯ ಠಾಕ್ರೆ, ಬೆಳಗಾವಿಯಲ್ಲಿ ಮರಾಠಿಗರನ್ನು ಟಾರ್ಗೇಟ್ ಮಾಡಲಾಗುತ್ತಿದೆ. ಮರಾಠಿಯನ್ನು ತುಳಿಯಲಾಗುತ್ತಿದೆ. ಅಲ್ಲಿ ಮರಾಠಿ ಭಾಷಿಕರ ಸ್ಥಿತಿ ಚಿಂತಾಜನಕವಾಗಿದೆ. ಮರಾಠಿ ಭಾಷಿಗರಿಗೆ ಹೆಚ್ಚು ಅನುದಾನ ನೀಡುತ್ತೇವೆ ಎಂದು ಹಿಂದಿನ ಸಿಎಂ ಹೇಳಿದ್ದರು. ಆದರೆ ಹೇಳಿದ ರೀತಿ ಅನುದಾನ ನೀಡಿದ್ದಾರೆಯೇ..? ಎಂದು ಆದಿತ್ಯ ಠಾಕ್ರೆ ಪ್ರಶ್ನಿಸಿದ್ದರು.ಅಲ್ಲದೇ ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದಿದ್ದರು.

ಇನ್ನು ಆದಿತ್ಯ ತೆಗೆದಿರುವ ಕ್ಯಾತೆಗೆ, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಶಿವರಾಜ್ ತಂಗಡಗಿ, ಬೆಳಗಾವಿಯನ್ನು ಕರ್ನಾಾಟಕದಿಂದ ಬೇರ್ಪಡಿಸುವ ಮಾತೇ ಇಲ್ಲ. ಬೆಳಗಾವಿ ಕನ್ನಡಿಗರ ಆಸ್ತಿ. ಅಧನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ರಾಜ್ಯ ಸರ್ಕಾರದ ಪರವಾಗಿ ಇನ್ನೆಂದೂ ಬೆಳಗಾವಿ ಸುದ್ದಿಗೆ ಬರಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

About The Author