- Advertisement -
Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ, ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದೆ.
ಕೃಷ್ಣಾ ನದಿಯಲ್ಲಿ ನೀರಿನ ಹೆಚ್ಚಳ ಹಿನ್ನಲೆ ಮಹಾರಾಷ್ಟ್ರದ ಪ್ರಸಿದ್ಧ ದತ್ತ ದೇವಸ್ಥಾನ ಮುಳುಗಡೆಯಾಗಿದೆ. ಪಂಚಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನದಲ್ಲಿ ನೀರು ತುಂಬಿದ್ದು, ನೀರಿನಲ್ಲೇ ಬಂದು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ.
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಈ ದೇವಸ್ಥಾನವಿದ್ದು, ಈ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ.
- Advertisement -

