ಪಕ್ಷ ಸಂಘಟನೆಗೆ HDK ಭರ್ಜರಿ ತಯಾರಿ!

ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಮತ್ತು ಸಂಪುಟ ಪುನಾರಚನೆ ವಿಚಾರ, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಧಗಧಗಿಸುತ್ತಿದೆ. ಈ ಮಧ್ಯೆ ಜೆಡಿಎಸ್‌ ಪಾಳಯಲ್ಲೂ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಕೇಂದ್ರ ಸಚಿವ, ಹಾಲಿ ರಾಜ್ಯಾಧ್ಯಕ್ಷ ಹೆಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯಕ್ಕೆ ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ. ಈ ವಿಷಯ ಚರ್ಚೆಗೆ ಬಂದಿಲ್ಲ. ಈಗ ನಾನೇ ಅಧ್ಯಕ್ಷನಾಗಿದ್ದೇನೆ. ನಿಖಿಲ್ ಕುಮಾರಸ್ವಾಮಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ, ಇದ್ಯಾವುದರ ಬಗ್ಗೆಯೂ ಚರ್ಚೆ ಆಗಿಲ್ಲ. ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ.

ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತಿತರ ಬಿಜೆಪಿ ನಾಯಕರು ಬಂದು ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ.

ಮತ್ತೆ ಕೋರ್ ಕಮಿಟಿ ರಚನೆ ಬಗ್ಗೆ ನಮ್ಮ ಪಕ್ಷದಲ್ಲಿ ಒಂದು ಸಭೆ ಆಗಿದೆ. ಕೋರ್ ಕಮಿಟಿ ಮತ್ತು ಕಾರ್ಪೋರೇಷನ್ ಚುನಾವಣೆ ಸಂಬಂಧ, ಪಕ್ಷ ಸಂಘಟನೆಗೆ ನಿರ್ಧಾರ ಮಾಡಿದ್ದೇವೆಂದು ಹೆಚ್‌ಡಿಕೆ ಹೇಳಿದ್ರು.

About The Author