ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಶೀಲಾ ಹಾಲ್ಕುರಿಕೆ ಸಾಮಾಜಿಕ ಕಾರ್ಯಕರ್ತೆ & ರಂಗಭೂಮಿ ನಟಿ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ರು. ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಿ. ಪರಮೇಶ್ವರ್, ಜಿಲ್ಲೆಯ ಇಬ್ಬರು ಉಪನಿರ್ದೇಶಕರ ಕೆಲಸದ ಬಗ್ಗೆ ಸಮಾಧಾನವಿಲ್ಲ. ನಿಮ್ಮ ಕಾರ್ಯವೈಖರಿ ಪರಾಮರ್ಶೆಗೆ ಪ್ರತ್ಯೇಕ ಸಭೆ ನಡೆಸಲಾಗುವುದು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗುರಿ ನಿಗದಿಪಡಿಸುವಂತೆ ಸೂಚಿಸಿದ್ದಾರೆ
ಚಿಕ್ಕನಾಯನಹಳ್ಳಿ ತಾಲ್ಲೂಕಿನ ಮಾದರಿ ಅಳವಡಿಕೆ ಬಗ್ಗೆ ನಿರ್ದೇಶಿಸಲಾಗಿತ್ತು. ಆದರೆ ಅನುಪಾಲನಾ ವರದಿಯಲ್ಲಿ ಈ ಬಗ್ಗೆ ಯಾವುದೇ ವಿಚಾರ ಪ್ರಸ್ತಾಪಿಸಿಲ್ಲ. ಫಲಿತಾಂಶ ಹೆಚ್ಚಳಕ್ಕೆ ಯಾವ ಕ್ರಮಗಳನ್ನೂ ತೆಗೆದುಕೊಂಡಂತೆ ಕಾಣುತ್ತಿಲ್ಲ. ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿಲ್ಲ. ಅವರ ಮೇಲೆ ಅಧಿಕಾರಿಗಳಿಗೆ ನಿಯಂತ್ರಣ ಇಲ್ಲವಾಗಿದೆ ಎಂದು ಪರಮೇಶ್ವರ್ ಸಿಟ್ಟಾಗಿದ್ದಾರೆ. ಪರಂ ಮಾತಿಗೆ ಶಾಸಕ ಬಿ. ಸುರೇಶ್‌ಗೌಡ, ಸಿ.ಬಿ. ಸುರೇಶ್‌ಬಾಬು ಸೇರಿದಂತೆ ಹಲವು ಶಾಸಕರು ಧ್ವನಿಗೂಡಿಸಿದ್ದಾರೆ.
ಬಿಇಒ, ಮುಖ್ಯ ಶಿಕ್ಷಕರು ಸಭೆ ಮಾಡುತ್ತಾರೆ. ಪಾಠ ಮಾಡುವ ಕಡೆಗೆ ಗಮನ ಹರಿಸುತ್ತಿಲ್ಲ. ಇದಕ್ಕೆ ಇವರನ್ನೇ ಹೊಣೆ ಮಾಡಬೇಕು ಎಂದು ಸುರೇಶ್‌ಗೌಡ ಆಗ್ರಹಿಸಿದರು. ಫಲಿತಾಂಶ ಹೆಚ್ಚಳಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಜಿ.ಪಂ ಸಿಇಒ ಜಿ.ಪ್ರಭು ಮಾಹಿತಿ ನೀಡಿದರು.

