ಚುನಾವಣಾ ಚತುರ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷಕ್ಕೆ ತೀವ್ರ ಹಿನ್ನಡೆ ಎದುರಾಗಿದೆ. ಮೊದಲ ಹಂತದ ಮತದಾನಕ್ಕೆ ಒಂದು ದಿನ ಮೊದಲು ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಪಕ್ಷ ಬದಲಿಸಿ ಬಿಜೆಪಿ ಸೇರಿದ್ದಾರೆ.
ಮುಂಗೇರ್‌ನಲ್ಲಿ ಜೆಎಸ್‌ಪಿಯಿಂದ ಕಣಕ್ಕಿಳಿದಿದ್ದ ಸಂಜಯ್ ಸಿಂಗ್, ಬಿಜೆಪಿ ಅಭ್ಯರ್ಥಿ ಕುಮಾರ್ ಪ್ರಣಯ್ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಜೆಎಸ್‌ಪಿಯ ಅಭ್ಯರ್ಥಿಗಳ ಸಂಖ್ಯೆ ಈಗ ನಾಲ್ಕರಷ್ಟು ಕಡಿಮೆಯಾಗಿದೆ. ಈ ಹಿಂದೆ ದಾನಾಪುರ, ಬ್ರಹ್ಮಪುರ ಮತ್ತು ಗೋಪಾಲ್‌ಗಂಜ್ ಅಭ್ಯರ್ಥಿಗಳು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ.
ಅಭಿವೃದ್ಧಿ ಮತ್ತು ಸ್ಥಿರ ಸರ್ಕಾರದ ಹಿತಾಸಕ್ತಿಗಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ನಾನು ಎನ್‌ಡಿಎ ಅಭ್ಯರ್ಥಿಯನ್ನು ಸಂಪೂರ್ಣವಾಗಿ ಬೆಂಬಲಿಸಲು ನಿರ್ಧರಿಸಿದ್ದೇನೆ.
ಬಹು ದೊಡ್ಡ ಅಂತರದಿಂದ ಅವರ ಗೆಲುವಿಗಾಗಿ ಎಲ್ಲ ಪ್ರಯತ್ನಗಳನ್ನು ಮಾಡುತ್ತೇನೆ. ನಿಜವಾದ ಬದಲಾವಣೆ ತರಲು ಅಗತ್ಯವಿರುವ ನಾಯಕತ್ವವನ್ನು, ಜೆಎಸ್‌ಪಿ ಒದಗಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಆದರೆ ಸಂಜಯ್ ಸಿಂಗ್ ಪಕ್ಷ ಬದಲಾವಣೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ. ಒಟ್ನಲ್ಲಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್‌ಗೆ ಬಿಹಾರ ಚುನಾವಣೆಯಲ್ಲಿ ಮೊದಲ ಹಿನ್ನಡೆಯಾಗಿದೆ.

