Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ನಡೆಸುತ್ತಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯರನ್ನು ಬೆಂಬಲಿಸಿ, ತುಮಕೂರಿನಲ್ಲಿ ಕುರುಬ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ಕುರುಬ ಸಂಘದವರು ಪ್ರತಿಭಟನೆ ನಡೆಸಿದ್ದು, ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಜನನಾಯಕ ಸಿಎಂ ಸಿದ್ದರಾಮಯ್ಯ ತೇಜೋವಧೆ ಮಾಡುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸಲು ಹೊರಟಿರುವ ರಾಜ್ಯಪಾಲರ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರೇ ಬಕೆಟ್ ಹಿಡಿಯುವದನ್ನ ಬಿಡಿ. ನಿಮ್ಮ ಹುದ್ದೆಯ ಘನತೆ ಉಳಿಸಿಕೊಳ್ಳಿ ಎಂದು ಪ್ಲೇಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ನಗರದ ಟೌನ್‌ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿ, ಬಿಜೆಪಿ- ಜೆಡಿಎಸ್ ವಿರುದ್ಧ ಘೋಷಣೆ ಕೂಗಿದ್ದು, ಪ್ರತಿಭಟನೆಯಲ್ಲಿ ಕುರುಬ ಸಮುದಾಯದ ನೂರಾರು ಜನರು ಭಾಗಿಯಾಗಿದ್ದಾರೆ.