Monday, October 6, 2025

Latest Posts

ಬೆಳಗಾವಿ ದೊಡ್ಡ ಜಿಲ್ಲೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು- ಸತೀಶ ಜಾರಕಿಹೊಳಿ

- Advertisement -

ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯೆ ನೀಡಿದರು.

ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ ಕೊಡಬೇಕು ಎಂಬುದನ್ನು ಸರ್ಕಾರ ನಡೆಸುವವರು ವಿಚಾರ ಮಾಡಿ, ನಿರ್ಧಾರ ತೆಗೆದುಕೊಳ್ಳಬೇಕಿತ್ತು ಆದರೆ ಬೆಳಗಾವಿ ರಾಜ್ಯದ ಎರಡನೇ ದೊಡ್ಡ ಜಿಲ್ಲೆಯಾಗಿದ್ದು ಇದರ ಬಗ್ಗೆ ವಿಚಾರಿಸಿ ಸಚಿವ ಸ್ಥಾನ ನೀಡಬೇಕಿತ್ತು.

ಹಾಗೇಯೆ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಬೆಳಗಾವಿಗೆ ಇನ್ನೂ ಕೆಲವರಿಗೆ ಸಚಿವ ಸ್ಥಾನಗಳನ್ನು ನೀಡಿದರೇ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಕೂಡ ಆಗ್ರಹ ಮಾಡುತ್ತೇವೆ ಎಂದು ಹೇಳಿದರು.

ಸರ್ಕಾರದ ಆಡಳಿತಾವಧಿ ಮುಂದಿನ ಕೆಲವೇ ತಿಂಗಳಾಗಿರುವುದರಿಂದ ಮತ್ತೆ ಜಿಲ್ಲೆಗೆ ಸಚಿವ ಸ್ಥಾನ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ಸರ್ಕಾರ ಹಾಗೂ ಮುಖ್ಯಮಂತ್ರಿಗಳೇ ಈ ಬಗ್ಗೆ ಉತ್ತರ ಕೊಡಬೇಕು. ವಿರೋಧ ಪಕ್ಷದವರಾಗಿ ನಾವು ಈ ಬಗ್ಗೆ ಮಾತನಾಡಲು ಆಗುವುದಿಲ್ಲ ಎಂದರು.

ನಾಗೇಶ್, ಕರ್ನಾಟಕ ಟಿವಿ, ಬೆಳಗಾವಿ

- Advertisement -

Latest Posts

Don't Miss