Wednesday, August 20, 2025

Latest Posts

ಕೆ.ಎನ್ ರಾಜಣ್ಣ ವಜಾ ಸಿಡಿದೆದ್ದ ನಾಯಕ ಸಮಾಜ!

- Advertisement -

ಕೆಲವು ದಿನಗಳ ಹಿಂದಷ್ಟೆ ಕಾಂಗ್ರೆಸ್‌ ಹಿರಿಯ ನಾಯಕ ಶಾಸಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಇದೀಗ ಇದನ್ನು ಖಂಡಿಸಿ ರಾಜ್ಯ ನಾಯಕರ ಯುವಸೇನೆ ಸದಸ್ಯರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಂಘಟನೆ ರಾಜ್ಯಾಧ್ಯಕ್ಷ ದೇವರಾಜು ಟಿ. ಕಾಟೂರ್‌ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಪ್ರಭಾವಿ ನಾಯಕರಾದ ರಾಜಣ್ಣ ಸಹಕಾರ ಸಚಿವರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದರು. ಯಾವುದೇ ನೋಟೀಸ್ ನೀಡದೆ ಕಾಂಗ್ರೆಸ್ ಹೈಕಮಾಂಡ್ ವಜಾ ಮಾಡಿರುವುದನ್ನು ಸಮಾಜ ಖಂಡಿಸುತ್ತದೆ ಎಂದರು.

ಮುಖ್ಯಮಂತ್ರಿಗಳ ಬೆನ್ನೆಲುಬಾಗಿದ್ದರು ಎಂಬ ಕಾರಣದಿಂದ ಅವರನ್ನು ವಜಾ ಮಾಡಲಾಗಿದೆ. ನಾಯಕ ಸಮಾಜದಿಂದ ಯಾರೂ ಮುಖ್ಯಮಂತ್ರಿಯಾಗಿಲ್ಲ. ರಾಜಣ್ಣ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬೇಡಿಕೆಯ ಹೇಳಿಕೆ ನೀಡುತ್ತಿದ್ದರು. ಇದರೊಂದಿಗೆ ಮುಖ್ಯಮಂತ್ರಿ ಸ್ಥಾನವನ್ನೂ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ಸಿಗರೇ ಕುತಂತ್ರ ಮಾಡಿದ್ದಾರೆ’ ಎಂದು ಆರೋಪಿಸಿದರು.

2023ರ ಚುನಾವಣೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರದಲ್ಲಿ ಗೆಲ್ಲಲು ನಾಯಕ ಸಮಾಜ ಪ್ರಭಾವ ಬೀರಿದೆ. ತಕ್ಷಣವೇ ಹೈಕಮಾಂಡ್ ಅವರನ್ನು ಸಚಿವ ಸಂಪುಟಕ್ಕೆ ಮತ್ತೆ ಸೇರಿಸಿಕೊಳ್ಳಬೇಕು. ಇಲ್ಲದಿದ್ದರೆ ಸ್ಥಳೀಯ ಚುನಾವಣೆಯಲ್ಲಿ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss