ಅಧಿಕಾರ ದಾಹವೇ ಕಾಂಗ್ರೆಸ್ ನ ಪರಮೋಚ್ಛ ಉದ್ದೇಶ, ಜನರ ಕಲ್ಯಾಣವಲ್ಲ! : ಬಿ.ವೈ.ವಿಜಯೇಂದ್ರ

Political News: ಸದ್ಯ ರಾಜ್ಯದಲ್ಲಿ ನೂತನ ಸಿಎಂ ಡಿ.ಕೆ.ಶಿವಕುಮಾರ್ ಆಡಳಿತ ಶುರು ಮಾಡಿದ್ದು, ಸಚಿವ ಸಂಪುಟ ರಚನೆ ಮಾಡಿದ್ದಾರೆ. ಆದರೆ ತಮಗೆ ಸಿಕ್ಕಿರುವ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಈಗಾಗಲೇ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಯಾಗಿದೆ. ಇದೀಗ ಮುನಿ.ಪ್ಪ ಕೂಡ ರಾಜೀನಾಮೆ ನೀಡುವ ಮಾತನಾಡಿದ್ದಾರೆ.

ಆದ್ರೆ, ವಿರೋಧ ಪಕ್ಷಕ್ಕೆ ವ್ಯಂಗ್ಯವಾಡಲು ಉತ್ತಮ ವಿಷಯ ಸಿಕ್ಕಿದ್ದು, ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ಪತನ ಗ್ಯಾರಂಟಿ ಅಂತಾ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ವಿಜಯೇಂದ್ರ,  ಮೊದಲು CM ಖುರ್ಚಿಗಾಗಿ ಕಿತ್ತಾಡುತ್ತಿದ್ದರು, ಈಗ ಸಾಚಿವ ಸ್ಥಾನಕ್ಕಾಗಿ, ಖಾತೆಗಾಗಿ ಕಿತ್ತಾಡುತ್ತಿದ್ದಾರೆ! ಭ್ರಷ್ಟಾಚಾರ ಅಧಿಕಾರ ಲಾಲಸೆ ಹಾಗೂ ಲಾಭದಾಯಕ ಹುದ್ದೆಗಳಿಗಾಗಿ ಕಿತ್ತಾಡುತ್ತಿರುವ ಕಾಾಂಗ್ರೆಸ್ ಸರ್ಕಾರ ಅತಿ ಶೀಘ್ರದಲ್ಲಿ ಪತನಗೊಳ್ಳಲಿದೆ ಎಂಬ ಬಿಜೆಪಿ ನಿರೀಕ್ಷೆ ನಿಜವಾಗುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು ಅಭಿವೃದ್ಧಿ ಖಾತೆಗಾಗಿ ಪಟ್ಟು ಹಿಡಿದು ಹಿರಿಯ ಸಚಿವ ರಾಮಲಿಂಗಾರೆಡ್ಡಿ ರಾಜಿನಾಮೆ ನೀಡಿರುವುದು ಇದಕ್ಕೆ ಸಾಕ್ಷಿ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ! ಎಂದು ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಮುಂಗಾರು ಹಂಗಾಮು ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ರೈತರಿಗೆ ಬೀಜ ರಸಗೊಬ್ಬರ ಮುಂತಾದ ನೆರವು ನೀಡ ಬೇಕಾದ ರಾಜ್ಯ ಸರ್ಕಾರ ಹೀಗೆ ಅಧಿಕಾರದ ಕಿತ್ತಾಟದಲ್ಲಿ ತೊಡಗಿರುವುದು ಕರ್ನಾಟಕದ ದುರಂತವೇ ಸರಿ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸರ್ಕಾರದ ಆಂತರಿಕ ಕಚ್ಚಾಟವನ್ನು ಬದಿಗೊತ್ತಿ ರಾಜ್ಯದ ರೈತರ, ಕೃಷಿ ಕಾರ್ಮಿಕರ, ಬಡವರ ಹಿತ ಕಾಪಾಡಬೇಕು. ಇಲ್ಲದಿದ್ದರೆ ಒಂದು ಕ್ಷಣವು ಅಧಿಕಾರದಲ್ಲಿ ಉಳಿಯದೆ ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನಾದೇಶ ಪಡೆಯಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ.

https://twitter.com/BYVijayendra/status/2062757037642310103

About The Author