Monday, January 13, 2025

Latest Posts

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸರ್ಕಾರ ಈ ರೀತಿ ಸಂಘರ್ಷ ಮಾಡುವುದು ಸರಿಯಲ್ಲ. ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿಯವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಸರ್ಕಾರ ಅದನ್ನ ಪಾಲನೆ ಮಾಡುವುದು ಒಳ್ಳೆಯದು. ಹೊರಟ್ಟಿಯವರು ಸರ್ಕಾರದ ನಡೆ ವಿರೋಧಿಸಿ ವಿಸ್ತ್ರತ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನವರಿಗೆ ಬುದ್ದಿ ಭ್ರಮಣೆಯಾಗಿದೆ. ಕಾಂಗ್ರೆಸ್ ಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ.

ರಾಜ್ಯದಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೇ ನಡೆದಿದೆ. ಆರ್ ಟಿ‌ ಓ ಸೇರಿದಂತೆ ಹಲವು ಕಡೆ ಭ್ರಷ್ಟಾಚಾರ ನಡೆದಿದೆ. ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ತನ್ನ ಹಿಡಿತ ಕಳೆದುಕೊಳ್ಳುತ್ತಿದೆ. ಇದಕ್ಕೆಲ್ಲ ಕಾಂಗ್ರೆಸ್ ನ ಒಳಜಗಳವೇ ಮುಖ್ಯ ಕಾರಣ ಎಂದು ಜೋಶಿ ಹೇಳಿದ್ದಾರೆ.

- Advertisement -

Latest Posts

Don't Miss