Movie News: ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಹಾಗೂ ರಣ್ ಬೀರ್ ಕಪೂರ್ , ಕನ್ನಡತಿ ರಶ್ಮಿಕಾ ಮಂದಣ್ಣ, ಪ್ರಮುಖಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ “ಅನಿಮಲ್” ಡಿಸೆಂಬರ್ 1 ರಂದು ತೆರೆಗೆ ಬರುತ್ತಿದೆ. ಹೆಸರಾಂತ ಕೆ.ವಿ.ಎನ್ ಸಂಸ್ಥೆ ಚಿತ್ರವನ್ನು ಬಿಡುಗಡೆ ಮಾಡುತ್ತಿದೆ.
ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿತ್ತು. ಈ ವೇಳೆ ಮಾಧ್ಯಮದೊಂದಿಗೆ ತಂಡದ ಸದಸ್ಯರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.
ನಟ ರಣಬೀರ್ ಕಪೂರ್ ಮಾತನಾಡಿ, ಇದು ವಿಭಿನ್ನವಾದ ಸಿನಿಮಾ. ತಂದೆ – ಮಗನ ಬಾಂಧವ್ಯದ ಜೊತೆ ಜೊತೆಗೆ ಹಿಂಸೆ ಮತ್ತು ಕ್ರೌರ್ಯಕ್ಕೆ ಒತ್ತು ನೀಡಿದ್ದಾರೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ. ಸೆಂಟಿಮೆಂಟ್ ಅಥವಾ ಹಿಂಸೆಗೆ ಎಷ್ಟು ಪ್ರಾಧಾನ್ಯತೆ ನೀಡಲಾಗಿದೆ ಎನ್ನುವುದನ್ನು ಚಿತ್ರದಲ್ಲಿ ನೋಡಬೇಕು. ಹಿರಿಯ ನಟರಾದ ಅನಿಲ್ ಕಪೂರ್ ಮತ್ತು ಬಾಬಿ ಡಿಯೋಲ್ ಅವರ ಜೊತೆ ನಟನೆ ಮಾಡಿದ್ದು ಒಳ್ಳೆಯ ಅನುಭವ. ಜೊತೆಗೆ ರಶ್ಮಿಕಾ ಮಂದಣ್ಣ ಪಾತ್ರಕ್ಕೆ ಜೀವ ತುಂಬಿದ್ದಾರೆ ಎಂದು ಹೇಳಿಕೊಂಡರು.
ನಟಿ ರಶ್ಮಿಕಾ ಮಂದಣ್ಣ ಮಾತನಾಡಿ, ಚಿತ್ರದಲ್ಲಿ ರಣಬೀರ್ ಕಪೂರ್ ಹೆಂಡತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ವಿಭಿನ್ನವಾದ ಪಾತ್ರ. ನಿರ್ದೇಶಕರ ಕಲ್ಪನೆಗೆ ತಕ್ಕಂತೆ, ಅವರು ಹೇಳಿದಂತೆ ಕೆಲಸ ಮಾಡಿದ್ದೇನೆ ಎಂದರು.
ಹಿರಿಯ ನಟ ಬಾಬಿ ಡಿಯೋಲ್ ಮಾತನಾಡಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಚಿತ್ರಕ್ಕಾಗಿ ಸಾಕಷ್ಟು ಪ್ರಯತ್ನ ಮತ್ತು ಎಫರ್ಟ್ ಹಾಕಿದ್ದೇನೆ ಎಂದು ತಿಳಿಸಿದರು.
ವಿತರಕ ಕೆ.ವಿ.ಎನ್ ಸಂಸ್ಥೆಯ ವೆಂಕಟ್ ಮಾತನಾಡಿ ಇದೇ ಶುಕ್ರವಾರ ರಾಜ್ಯಾದ್ಯಂತ ಚಿತ್ರವನ್ನು ತೆರೆಗೆ ತರಲಾಗುವುದು. ಬೆಳಗ್ಗೆ ಏಳು ಗಂಟೆಗೆ ಪ್ರದರ್ಶನ ಆರಂಭವಾಗಲಿದೆ ಎಂದು ಹೇಳಿದರು.
ನಿರ್ಮಾಪಕ ಭೂಷಣ್ ಕುಮಾರ್ ಸೇರಿದಂತೆ ಅನೇಕ ಸದಸ್ಯರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.
ಹಿರಿಯ ನಟಿ ಲೀಲಾವತಿ ನಿರ್ಮಾಣದ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್
ನಟಿ ಲೀಲಾವತಿಯವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದೆ: ಡಿ.ಕೆ ಶಿವಕುಮಾರ್