Saturday, July 27, 2024

Latest Posts

ಮೈಸೂರು ದಸರಾ ಆನೆ ಇನ್ನಿಲ್ಲ: ವಿದ್ಯುತ್ ತಂತಿ ತಗುಲಿ ಅಶ್ವತ್ಥಾಮ ಸಾವು

- Advertisement -

News: ವಿಶ್ವವಿಖ್ಯಾತ ಮೈಸೂರು ದಸರಾದ ಮತ್ತೊಂದು ಆನೆ ಮೃತಪಟ್ಟಿದೆ. ಆಹಾರ ಹುಡುಕಿಕೊಂಡು ಕಾಡಿಗೆ ತೆರಳಿದ್ದ 38 ವರ್ಷದ ಅಶ್ವತ್ಥಾಮ ಆನೆಯು ವಿದ್ಯುತ್‌ ತಂತಿ ತಗುಲಿ ಸಾವಿಗೀಡಾಗಿದೆ. ಶಾಂತ ಸ್ವಭಾವದ ಆನೆ ಇದಾಗಿತ್ತು.

ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಈ ಆನೆ ಇತ್ತು. ಆಹಾರ ಅರಸಿ ಕಾಡಿಗೆ ತೆರಳಿದ್ದಾಗ ಹೊಲಕ್ಕೆ ಹಾಕಲಾಗಿದ್ದ ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಸ್ಪರ್ಶದಿಂದ ಅಶ್ವತ್ಥಾಮ ಮೃತಪಟ್ಟಿದೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಈ ಆನೆಯನ್ನು ಸೆರೆ ಹಿಡಿದ ನಾಲ್ಕು ವರ್ಷದಲ್ಲಿಯೇ ದಸರಾಗೆ ಕರೆತರಲಾಗಿತ್ತು. 2021 ಹಾಗೂ 2022ರ ದಸರಾದಲ್ಲಿ ಅಶ್ವತ್ಥಾಮ ದಸರಾದಲ್ಲಿ ಪಾಲ್ಗೊಂಡಿತ್ತು. ಆದರೆ, ಮೊದಲ ತನ್ನ ದಸರಾ ಮೆರವಣಿಗೆಯಲ್ಲಿ ಅಶ್ವತ್ಥಾಮ ಗಮನ ಸೆಳೆದಿತ್ತು. ಅಷ್ಟೇ ಅಲ್ಲ, ಅಶ್ವತ್ಥಾಮ ಆನೆಯು ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿತ್ತು.

ಕೆಲ ತಿಂಗಳುಗಳ ಹಿಂದೆ ಹಾಸನದಲ್ಲಿ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ದಸರಾ ಆಸೆ ಅರ್ಜುನ ಕೂಡ ಮೃತಪಟ್ಟಿತ್ತು. ಈಗ ಮತ್ತೊಂದು ದಸರಾ ಆನೆಯನ್ನು ಕಳೆದುಕೊಂಡಂತಾಗಿದೆ.

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?

ಮೋದಿ ಕ್ಯಾಬಿನೆಟ್ 3.0: ಯಾರಿಗೆ ಯಾವ ಖಾತೆ?

- Advertisement -

Latest Posts

Don't Miss