Thursday, December 12, 2024

Latest Posts

ಕನ್ನಡಿಗರನ್ನ ಕಡೆಗಣಿಸಿರುವುದು ಖಂಡನೀಯ

- Advertisement -

www.karnatakatv.net :ಬೆಳಗಾವಿ: ಕಳೆದ ಎರಡು ದಶಕಗಳ ಬಳಿಕ ಪಾಲಿಕೆಯಲ್ಲಿ ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧೆ ನಡೆಸುತ್ತಿವೆ. ಟಿಕೆಟ್ ಹಂಚಿಕೆಯ ವೇಳೆ ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್, ಬಿಜೆಪಿ ಟಿಕೆಟ್ ಹಂಚಿಕೆ ಮಾಡಬೇಕಿತ್ತು ಆದರೆ ಕನ್ನಡಿಗರನ್ನು ಕಡೆಗಣಿಸಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು

ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ  ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಬೆಳಗಾವಿ ‌ಮಹಾನಗರ ಪಾಲಿಕೆಯ ಚುನಾವಣೆ ಟಿಕೆಟ್ ಹಂಚಿಕೆ ಮಾಡುವಾಗ ಕನ್ನಡ ಸಂಘಟನೆಗಳ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದರು.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಹಿನ್ನಲೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ‌ ಹಾಗೂ‌ ಕಾಂಗ್ರೆಸ್ ಎಂಇಎಸ್ ಜತೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಕೈ ಜೊಡಿಸಿದರೆ ಕನ್ನಡ ಸಂಘಟನೆಗಳ ವಿರೋಧ ಇದೆ ಎಂದು ಕನ್ನಡ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಹೇಳಿದರು.

ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯ ಪ್ರಕ್ರಿಯೆ ಆರಂಭವಾಗಿದ್ದು, ಪಾಲಿಕೆಯ ಇತಿಹಾಸದಲ್ಲಿ ‌ಮೊದಲ ಬೆಳವಣಿಗೆ ಆಗಿದೆ. ಕಳೆದ‌ 25 ವರ್ಷಗಳ ಬಳಿಕ ರಾಷ್ಟ್ರೀಯ ಪಕ್ಷಗಳು ಪಾಲಿಕೆಯ ಚುನಾವಣೆಯಲ್ಲಿ ಸೆಣಸಾಟ ನಡೆಸುತ್ತಿದ್ದಾರೆ ಎಂದರು. ಕರವೇ ಜಿಲ್ಲಾಧ್ಯಕ್ಷ ದೀಪಕ‌ ಗುಡಗನಟ್ಟಿ, ಶಂಕರ, ಮಹಾದೇವ ತಳವಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಾಗೇಶ ಕುಂಬಳಿ, ಕರ್ನಾಟಕ ಟಿವಿ- ಬೆಳಗಾವಿ

- Advertisement -

Latest Posts

Don't Miss