Crime News: ಗದಗ: ಒಡಹುಟ್ಟಿದ ತಮ್ಮನನ್ನೇ ಸಹೋದರ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ. ಅಷ್ಟೇ ಅಲ್ಲದೇ, ಕೊಡಲಿ ಸಮೇತವಾಗಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಎದುರಿಗೆ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ.
ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ತಾರಕಕ್ಕೇರಿ, ಈ ದುರಂತ ನಡೆದಿದೆ. ಗದಗ ಜಿಲ್ಲೆಯ ರೋಣ ಪಟ್ಟಣದ ಬಳಿಯ ಜಮೀನಿನಲ್ಲಿ ಈ ದುರ್ಘಟನೆ ನಡೆದಿದ್ದು, ಶೇಕಪ್ಪ ನವಲಗುಂದ (36) ಎಂಬಾತನೇ ಕೊಲೆಗೀಡಾದ ವ್ಯಕ್ತಿಯಾಗಿದ್ದಾನೆ. ಈತ ಹುಬ್ಬಳ್ಳಿಯ ಬಿಆರ್ಟಿಸಿ ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ.
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಇಬ್ಬರ ನಡುವೆ ಕಲಹ ನಡೆದಿತ್ತು. ಈ ಕಲಹ ಇಂದು ವಿಕೋಪಕ್ಕೆ ಹೋಗಿದ್ದು, ಕೊಲೆಯಲ್ಲಿ ಅಂತ್ಯ ಕಂಡಿದೆ. ಕೊಲೆಗೈದ ಆರೋಪಿ ಕೊಡಲಿ ಸಮೇತ ಠಾಣೆಗೆ ಶರಣಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುದ್ದಿ ತಿಳಿದು ರೋಣ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಚುನಾವಣೆಯಲ್ಲಿ ಸೋತರೂ, ಕೊಟ್ಟ ಮಾತು ಉಳಿಸಿಕೊಂಡ ಮದ್ದೂರು ಬಿಜೆಪಿ ಅಭ್ಯರ್ಥಿ