Hubli News: ಹುಬ್ಬಳ್ಳಿ: ಜನರ ಸುರಕ್ಷಿತವಾಗಿ ಸರ್ಕಾರ ಸಂಚಾರಿ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಕೆಲವರು ಮಾತ್ರ ನಿಯಮ ಉಲ್ಲಂಘಿಸಿ ಓಡಾಡತ್ತಾರೆ. ಹೀಗೆ ನಿಯಮ ಉಲ್ಲಂಘಿಸಿ ಓಡಾಡುವ ವಾಹನ ಸವಾರರಿಗೆ ಸಂಚಾರಿ ಪೊಲೀಸರು ತಡೆದು ದಂಡ ವಿಧಿಸಿ ಬುದ್ದಿ ಕಲಿಸತ್ತಾರೆ. ಅದರಂತೆ ಇದೀಗ ಹುಬ್ಬಳ್ಳಿಯ ಸಂಚಾರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಸಂಚಾರ ಮಾಡುತ್ತಿದ್ದ ಇಬ್ಬರು ಪೊಲೀಸರಿಗೆ ದಂಡ ವಿಧಿಸಿದ್ದಾರೆ.
ಹೌದು, ಸಂಚಾರ ನಿಯಮ ಉಲ್ಲಂಘಿಸಿದ ಬೆಂಡಿಗೇರಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳಿಗೆ ದಂಡವಿಧಿಸಲಾಗಿದ್ದು, ಇವರು ಚೆನ್ನಮ್ಮ ವೃತ್ತದ ಬಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ ಸಂದರ್ಭದಲ್ಲಿ ಡಿಸಿಪಿ ಸಿ.ಆರ್ ರವೀಶ್ ಅವರು ಕಾನ್ಸಟೇಬಲ್ ಗಳನ್ನು ತಡೆದು ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಾಕ್ಸನ್ ಡಿಸೋಜಾ ಅವರಿಗೆ ದಂಡ ವಿಧಿಸಲು ಸೂಚಿಸಿದ್ದಾರೆ.
ಬಳಿಕ ಪಿಐ ಡಿಸೋಜಾ ಅವರು ನಿಯಮ ಉಲ್ಲಂಘಿಸಿದ ಪೊಲೀಸರಿಗೆ ದಂಡ ವಿಧಿಸಿದ್ದಾರೆ. ಈ ಮೂಲಕ ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ತಿಳಿಸಿ ಕೊಟ್ಟಿದ್ದಾರೆ.