Sunday, November 9, 2025

Latest Posts

ಸಿಎಂ ರೇಸ್‌ನಲ್ಲಿ ಒಬ್ಬರಲ್ಲ ಮೂವರ ಹೆಸರು!

- Advertisement -

ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಯತೀಂದ್ರ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಪರ ಬ್ಯಾಟ್ ಬೀಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸಿದೆ. ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಯೂ ಉದ್ಭವವಾಗಿದ್ದು, ಹಲವು ನಾಯಕರ ಹೆಸರು ಚರ್ಚೆಗೆ ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟರ್‌ಗಳು ಹರಿದಾಡುತ್ತಿವೆ.

ನಾಯಕತ್ವ ಬದಲಾವಣೆ ಹಾಗೂ ಇತರ ವಿಚಾರಗಳ ಬಗ್ಗೆ ಮಾತನಾಡುವ ಸಂದರ್ಭದಲ್ಲಿ, ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದ ಅಂತಿಮ ಹಂತದಲ್ಲಿದ್ದಾರೆ. ಈ ಹಂತದಲ್ಲಿ ಅವರಿಗೆ ಬಲವಾದ ಸಿದ್ಧಾಂತ ಮತ್ತು ಪ್ರಗತಿಪರ ಮನಸ್ಥಿತಿಯನ್ನು ಹೊಂದಿರುವ ನಾಯಕನ ಅಗತ್ಯವಿದೆ. ಸೈದ್ದಾಂತಿಕ ಮನಸ್ಥಿತಿ ಹೊಂದಿರುವ ನಾಯಕರಿಗೆ, ಸಿದ್ದರಾಮಯ್ಯ ಅವರು ಮಾರ್ಗದರ್ಶಕ ಆಗಬಹುದು ಎಂದಿರುವ ಯತೀಂದ್ರ. ಇದೇ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಹೆಸರನ್ನು ಮುನ್ನಲೆಗೆ ತಂದಿದ್ದಾರೆ.

ಮತ್ತೊಂದೆಡೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯನ್ನು ಶುರು ಮಾಡಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಪೋಸ್ಟರ್‌ಗಳನ್ನ ಹರಿಯಬಿಡಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಉತ್ತರಾಧಿಕಾರಿಯಾಗಿ ಸತೀಶ್ ಜಾರಕಿಹೊಳಿ ಇರುತ್ತಾರೆಂಬ, ಅರ್ಥದಲ್ಲಿ ಚರ್ಚೆಗಳು ನಡೆಯುತ್ತಿವೆ. ಮತ್ತೊಂದು ಕಡೆಯಲ್ಲಿ ಇತರ ನಾಯಕರ ಅಭಿಮಾನಿಗಳು, ಆಪ್ತರು ಆ್ಯಕ್ಟೀವ್ ಆಗಿದ್ದಾರೆ. ಸಿದ್ದರಾಮಯ್ಯ ನಂತರದಲ್ಲಿ ಅವರ ಉತ್ತರಾಧಿಕಾರಿಯಾಗಲು ನಮ್ಮ ನಾಯಕರಿಗೆ ಎಲ್ಲಾ ಯೋಗ್ಯತೆಗಳು ಇವೆ ಎಂದು ಬಿಂಬಿಸಲಾಗುತ್ತಿದೆ.

ಸತೀಶ್ ಜಾರಕಿಹೊಳಿ ಜೊತೆಗೆ ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್, ಜಿ. ಪರಮೇಶ್ವರ್ ಹೆಸರುಗಳು ಹರಿದಾಡ್ತಿವೆ. ಪ್ರಿಯಾಂಕ್ ಖರ್ಗೆ ಪೋಸ್ಟರ್ ಮಾಡಿಕೊಂಡು ಸಿದ್ದರಾಮಯ್ಯ ನಂತರದಲ್ಲಿ, ಸೈದ್ದಾಂತಿಕ ಬದ್ಧತೆ ಹೊಂದಿರುವ ನಾಯಕರು ಇವರೇ ಎಂದು, ಅವರ ಅಭಿಮಾನಿಗಳು ಚರ್ಚೆ ಶುರು ಮಾಡಿಕೊಂಡಿದ್ದಾರೆ. ಈಗಾಗಲೇ ಸತೀಶ್ ಜಾರಕಿಹೊಳಿ ಸಿಎಂ ರೇಸ್ ನಲ್ಲಿ ಇದ್ದಾರೆ. ಆದರೆ ನಾನು 2028ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ. ಮತ್ತೊಂದು ಕಡೆಯಲ್ಲಿ ಜಿ ಪರಮೇಶ್ವರ್ ಮೊದಲ ದಲಿತ ಸಿಎಂ ಆಗುವ ತವಕದಲ್ಲಿದ್ದಾರೆ. ಇನ್ನುಳಿದಂತೆ ಎಂಬಿ ಪಾಟೀಲ್ ಹಾಗೂ ಇತರ ಹಿರಿಯ ನಾಯಕರು ತಮ್ಮದೇ ಆದ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

- Advertisement -

Latest Posts

Don't Miss