ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮರು ಎಣಿಕೆ ಕಾರ್ಯ ನಿನ್ನೆ ತಡರಾತ್ರಿಯವರೆಗೂ ನಡೆದಿತ್ತು. ಬಿಜೆಪಿ ಪಾರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ರು. ಮರು ಮತ ಎಣಿಕೆ ಮುಕ್ತಾಯಗೊಂಡ ಬಳಿಕ ಕೊಠಡಿಯಿಂದ ಹೊರಬರುತ್ತಿದ್ದಂತೆ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಕಣ್ಣೀರಿಟ್ಟಿದ್ದಾರೆ.
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶವನ್ನು, ಚುನಾವಣಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಿದೆ. ಸುಪ್ರೀಂಕೋರ್ಟ್ ನವೆಂಬರ್ 24ರಂದು ಫಲಿತಾಂಶ ಪ್ರಕಟಿಸಲಿದೆ. ಹೀಗಾಗಿ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.
ಇನ್ನು, ಒಟ್ಟು 18 ಸುತ್ತು ಮರುಮತ ಎಣಿಕೆ ಕಾರ್ಯ ನಡೆದಿದೆ. ಆದ್ರೆ, ಮರುಎಣಿಕೆ ನನಗೆ ಸಮಾಧಾನ ಆಗಿಲ್ಲ. ಇನ್ನೂ ಕೆಲವೊಂದು ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ. ಅಧಿಕಾರಿಗಳ ಪ್ರೊಸಿಜರ್ ಲ್ಯಾಪ್ಸ್ ಇದೆ. ಸಂಪೂರ್ಣ ವಿವಿ ಪ್ಯಾಟ್ಗಳನ್ನು ಎಣಿಸಬೇಕಿತ್ತು ಎಂದು, ಮಂಜುನಾಥ್ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆದರೆ ಕೇವಲ ಐದು ವಿವಿ ಪ್ಯಾಟ್ ಮಾತ್ರ ಎಣಿಕೆ ಮಾಡಿದ್ದಾರೆ. ಚುನಾವಣೆ ಮರುಎಣಿಕೆ ವಿರುದ್ದ ನನ್ನ ಕಾನೂನು ಹೋರಾಟ ಮುಂದುವರೆಯಲಿದೆ. ಸುಪ್ರೀಂ ಕೋರ್ಟ್ ಅರ್ಜಿದಾರರ ಮನವಿಯನ್ನು ಪರಿಗಣಿಸಿ ಎಂದು ಹೇಳಿತ್ತು. ಆದರೆ ಕೆಲವು ಮನವಿಗೆ ಪ್ರಾಧಾನ್ಯತೆ ಸಿಕ್ಕಿಲ್ಲ. ನನ್ನ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದಿದ್ದಾರೆ.




