Movie News: ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ ” ಕೃಷ್ಣಂ ಪ್ರಣಯ ಸಖಿ”. ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು. ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ.
ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್ ನಲ್ಲಿ ಚಿತ್ರೀಕರಣ ನಡೆಯಲಿದೆ.
ಜುಲೈ 2, ನಾಯಕ ಗಣೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು.
ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿ ನಟಿಸಿದ್ದಾರೆ.
ಒಡಹುಟ್ಟಿದ ತಮ್ಮನನ್ನೇ ಕೊಚ್ಚಿ ಕೊಲೆಗೈದ ಅಣ್ಣ: ಕೊಡಲಿ ಸಮೇತ ಠಾಣೆಗೆ ಬಂದು ಶರಣಾಗತಿ