Saturday, November 29, 2025

Latest Posts

ಬಿಜೆಪಿ ನಾಯಕರ ಪರಿಸ್ಥಿತಿ ಇಂಗು ತಿಂದ ಮಂಗನಂತಾಗಿದೆ: ಸಚಿವ ದಿನೇಶ್ ಗುಂಡೂರಾವ್

- Advertisement -

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಈ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

ನಮ್ಮ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿ ನಾಯಕರ ಪರಿಸ್ಥಿತಿ ಇಂಗು ತಿಂದ ಮಂಗನಂತಾಗಿದೆ. ಯಾವ ಬೆಲೆಯೇರಿಕೆ ವಿಚಾರವನ್ನು ಎನ್‌ಕ್ಯಾಶ್ ಮಾಡಿಕೊಳ್ಳಲು ಹೊರಟಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಸ್ವತಃ ಮೋದಿಯವರೆ ಮುಟ್ಟಿ ನೋಡಿಕೊಳ್ಳುವಂತೆ ಶಾಕ್ ಕೊಟ್ಟಿದ್ದಾರೆ ಎಂದು ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

ರಾಜ್ಯ ಬಿಜೆಪಿ ನಾಯಕರು ಇಲ್ಲಿ ಬೆಲೆಯೇರಿಕೆಯಾಗಿದೆ ಎಂದು ಬೀದಿ ನಾಟಕ ಆಡುವ ಹೊತ್ತಿನಲ್ಲೇ ನರೇಂದ್ರ ಮೋದಿಯವರು ಅಡುಗೆ ಅನಿಲ ದರ ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹೆಚ್ಚಿಸಿದ್ದಾರೆ. ಈ ಮೂಲಕ ಬೆಲೆ ಏರಿಕೆಗೆ ಮೂಲ ಪುರುಷರೇ ತಾವು ಎಂದು ಸಾಬೀತು ಪಡಿಸಿದ್ದಾರೆ‌‌.

ಪಾಪ ಈಗ ರಾಜ್ಯ ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆಯನ್ನು ರಾಜ್ಯ ಸರ್ಕಾರದ ವಿರುದ್ಧ ಮಾಡಬೇಕೋ ಅಥವಾ ಕೇಂದ್ರ ಸರ್ಕಾರದ ವಿರುದ್ಧ ಮಾಡಬೇಕೋ ಎಂಬುದೇ ದೊಡ್ಡ ಗೊಂದಲವಾಗಿದೆ. ರಾಜ್ಯ ಬಿಜೆಪಿ‌ ನಾಯಕರಿಗೆ ಇಂತಹ ‌ಮುಖಭಂಗದ ಪರಿಸ್ಥಿತಿ ಬರಬಾರದಿತ್ತು‌ ಎಂದು ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

- Advertisement -

Latest Posts

Don't Miss