Saturday, July 27, 2024

Latest Posts

ಕುಡಿಯುವ ನೀರಿನ ದಂಧೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ..

- Advertisement -

Political News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನೀರಿನ ದಂಧೆ ತಡೆಗಟ್ಟಲು ರಾಜ್ಯ ಸರ್ಕಾಾರ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿರುವ ಬಗ್ಗೆ ಡಿಕೆಶಿ ಮಾಹಿತಿ ನೀಡಿದ್ದಾರೆ.

ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುತ್ತಿದೆ.

ಈ ಸಂಬಂಧ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಪ್ರತಿನಿತ್ಯ ಸಭೆ ನಡೆಸುತ್ತಿದ್ದಾರೆ. ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾರ್ಚ್ 7ರ ಒಳಗಾಗಿ bbmp.oasisweb.in/TankerManageme ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಈ ವಿಚಾರವಾಗಿ ಮಾರ್ಚ್ 4ರಂದು ಮಧ್ಯಾಹ್ನ 12 ಗಂಟೆಗೆ ಬಿಬಿಎಂಪಿ ಆಯುಕ್ತರು, ಬಿಡಬ್ಲ್ಯೂಎಸ್‌ಎಸ್‌ಬಿ ಅಧ್ಯಕ್ಷರು, ಬೆಂಗಳೂರು ನಗರ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಬಿಬಿಎಂಪಿ ಜೋನಲ್‌ ಕಮಿಷನರ್‌ಗಳು, ಜಂಟಿ ಆಯುಕ್ತರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು.

ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ರೂ. ನೀಡಲಾಗಿದೆ. ನೀರು ಪೂರೈಸುವ ಟ್ಯಾಂಕರ್ ಗಳು ಸಾರ್ವಜನಿಕರಿಂದ ಮಿತಿ ಮೀರಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರಿಗೆ ಸಹಾಯವಾಗುವ ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಭೆಯನ್ನು ಆಯೋಜಿಸಲಾಗಿದೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.

- Advertisement -

Latest Posts

Don't Miss