Monday, May 12, 2025

Latest Posts

ಬಾಲಕಿ ಹಂತಕನ ಶವ ಕೊಳೆತ, ಹೈಕೋರ್ಟ್‌ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ

- Advertisement -

Hubli News: ಹುಬ್ಬಳ್ಳಿ: ಕಳೆದ 15 ದಿನಗಳ ಹಿಂದೆ ಬಿಹಾರಿ ಮೂಲದ ಹಂತಕ ರಿತೀಶ್ ಕುಮಾರ, ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಹಾಗೂ ಪೊಲೀಸ್ ಎನ್ನೊಂಟರ್‌ಗೆ ಬಲಿಯಾಗಿರುವ, ರಿತೇಶ್ ಕುಮಾರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸದ್ಯ ಶವ ಕೊಳೆಯುತ್ತಿರುವುದರಿಂದ ಸಮಾಧಿ ಮಾಡುವ ಅಗತ್ಯವಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಆರೋಪಿ ಹಾಗೂ ಪೊಲೀಸ್ ಎಂಟರ್‌ನಲ್ಲಿ ಮೃತಪಟ್ಟಿರುವ ರಿತೇಶ್ ಕುಮಾರ್ ಮೃತದೇಹ ಇಡೀ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿದೆ. ಮೃತದೇಹ ದಹನ ಮಾಡದಂತೆ ಸಂರಕ್ಷಿಸಿ ಇಡಲು ನಿರ್ದೇಶನ ನೀಡಬೇಕೆಂದು ಕೋರಿ ಪಿಯುಸಿಎಲ್ ಸಂಘಟನೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು, ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ, ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ನಡೆಸಿತು. ಅಡ್ವಕೇಟ್ ಜನರಲ್ ಕೆ. ಶಶಿ ಕಿರಣ್ ಶೆಟ್ಟಿ ಹಾಜರಾಗಿ, ಈ ಕೇಸಲ್ಲಿ ಹೈಕೋರ್ಟ್‌ ನೀಡಿದ್ದ ನಿರ್ದೇಶನ, ಸುಪ್ರೀಂಕೋರ್ಟ್ ಮಾರ್ಗಸೂಚಿ ಪಾಲಿಸಿರುವುದಾಗಿ ತಿಳಿಸಿದರು. ಸರ್ಕಾರದ ವರದಿಗೆ ಪ್ರತಿಕ್ರಿಯೆ ನೀಡಲು ಕಾಲಾವಕಾಶ ಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದರು. ಹಾಗಾಗಿ ಕೋರ್ಟ್ ವಿಚಾರಣೆಯನ್ನು ಏಪ್ರಿಲ್ 28ಕ್ಕೆ ಮುಂದೂಡಲಾಗಿದೆ. ಈ ವೇಳೆ ಶವ ಪರೀಕ್ಷೆ ನಡೆಸಿ ವಿಡಿಯೋ ಗ್ರಾಫ್ ಮಾಡಲಾಗಿದೆ. ಶವ ಕೊಳೆಯುವುದು ಪ್ರಮಾಣ ಹೆಚ್ಚಾಗಿದೆ ಎಂದು ವರದಿ ಹೇಳಿದೆ.

- Advertisement -

Latest Posts

Don't Miss