ಹುಬ್ಬಳ್ಳಿ: ಅದು ಹುಬ್ಬಳ್ಳಿ-ಧಾರವಾಡಕ್ಕೆ ಮಾತ್ರವೇ ಸಿಮೀತವಾಗಿರುವ ಚುನಾವಣೆ ಅಂತೂ ಅಲ್ಲವೇ ಅಲ್ಲ. ಆದರೂ ಕೂಡ ರಾಜ್ಯದಲ್ಲಿಯೇ ಈ ಚುನಾವಣೆ ಈ ಕಣ ರಂಗೇರಿದೆ. ರಾಜ್ಯ ನಾಯಕರ ದೃಷ್ಟಿ ನೆಟ್ಟಿದ್ದು, ದಿನದಿಂದ ದಿನಕ್ಕೆ ಮೆರಗು ಪಡೆದುಕೊಳ್ಳುತ್ತಿದೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್…
ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯಾಗಿರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಠಿಸಿದೆ. ಕಾಂಗ್ರೆಸ್, ಬಿಜೆಪಿ, ಆಮ್ ಆದ್ಮಿ, ಶಿವಸೇನಾ, ಜೆಡಿಎಸ್ ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳು ಚುನಾವಣೆ ಶತಾಯು ಗತಾಯು ಹೋರಾಟ ನಡೆಸುತ್ತಿವೆ. ಆದರೆ ಬಿಜೆಪಿ ಪಕ್ಷ ಮಾತ್ರ ಪಾಲಿಕೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ನಾಯಕರು ಹುಬ್ಬಳ್ಳಿಯಲ್ಲಿಯೇ ಠಿಕಾಣಿ ಹೂಡಿದ್ದಾರೆ. ಹೌದು.. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಕಲಬುರಗಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆ ಆಗಿದೆ. ಆದರೆ ಎಲ್ಲ ರಾಜಕೀಯ ನಾಯಕರ ದೃಷ್ಠಿ ಬಿದ್ದಿರುವುದು ಮಾತ್ರ ಅವಳಿನಗರದ ಚುನಾವಣೆ ಮೇಲೆ. ಆದ್ದರಿಂದ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಹಾಗೂ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ನೇತೃತ್ವದಲ್ಲಿ ಸಾಕಷ್ಟು ಪ್ರಮಾಣದಲ್ಲಿ ತಯಾರಿ ನಡೆಯುತ್ತಿದೆ.
ಇನ್ನೂ ಭಾರತೀಯ ಜನತಾ ಪಕ್ಷ 82 ವಾರ್ಡ್ ಗಳಲ್ಲಿ ಈ ಬಾರಿಗೆ 60ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಉತ್ಸಾಹವನ್ನು ಹೊಂದಿದ್ದು, ಈಗಾಗಲೇ ಜನಾಶೀರ್ವಾದ ಯಾತ್ರೆ, ಪೂರ್ವಭಾವಿ ಸಭೆ ಮಾಡುವ ಮೂಲಕ ಪಾಲಿಕೆ ಚುನಾವಣೆಗೆ ಕಾರ್ಯತಂತ್ರ ರೂಪಸುತ್ತಿದೆ. ಅಲ್ಲದೆ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ನೂತನ ಸಚಿವ ಶಂಕರಪಾಟೀಲ ಮುನೇನಕೊಪ್ಪ ಇಲ್ಲಿಯೇ ಬಿಡು ಬಿಟ್ಟಿದ್ದು, ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಹುಬ್ಬಳ್ಳಿ ವಾಸ್ತವ್ಯ ಹೂಡಿದ್ದಾರೆ. ಅಲ್ಲದೇ ಮಾಜಿ ಸಿಎಂ ಶೆಟ್ಟರ್ ಹಾಗೂ ಕೇಂದ್ರ ಸಚಿವ ಜೋಶಿಯವರು ಬಿಜೆಪಿ ಅಭಿವೃದ್ಧಿ ಕಾರ್ಯದ ಕುರಿತು ಮನವರಿಕೆ ಮಾಡುತ್ತಿದ್ದಾರೆ.
ಕರ್ನಾಟಕ ಟಿವಿ ಹುಬ್ಬಳ್ಳಿ