ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದುರ್ವರ್ತನೆ ತೋರಿದ ಕಾರಣಕ್ಕೆ ಪ್ರಸ್ತುತ ಚಳಿಗಾಲದ ಅಧಿವೇಶನಕ್ಕೆ 12 ರಾಜ್ಯಸಭಾ ಸದಸ್ಯರನ್ನು ಅಮಾನತ್ತು ಮಾಡಲಾಗಿದೆ. 12 ಸದಸ್ಯರು ಕ್ಷಮೆ ಕೇಳಿದರೆ ಅಮಾನತ್ತು ರದ್ದುಗೊಳಿಸಲಾಗುತ್ತದೆ ಎಂದು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯಸಭೆಯ ಆಡಳಿತ ಪಕ್ಷದ ನಾಯಕ ಪಿಯುಷ್ ಗೋಯಲ್ ಹೇಳಿದ್ದಾರೆ. ಮಂಗಳವಾರ ರಾಜ್ಯಸಭೆ ಕಲಾಪ ಆರಂಭವಾಗುವಾಗಲೇ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ವಿಪಕ್ಷಗಳ ಸದಸ್ಯರು ಅಮಾನತ್ತು ಆದೇಶ ರದ್ದುಪಡಿಸಬೇಕೆಂದು, ಕಲಾಪದ ನಿಯಮಗಳಿಗೆ ವಿರುದ್ಧವಾಗಿ ನಿರ್ಣಕೈಗೊಳ್ಳಲಾಗಿದೆ ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು 12 ಸದಸ್ಯರ ದುರ್ವರ್ತನೆ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ, ಇದೆ ಅಂತಿಮ ಅವರು ಕ್ಷಮಾಪಣೆ ಕೇಳದವರತು ಅಮಾನತ್ತು ರದ್ದು ಮಾಡುವುದಿಲ್ಲ , ಮೇಲಾಗಿ ಇದು ಸಭಾಧ್ಯಕ್ಷರು ತೆಗೆದುಕೊಂಡ ಕ್ರಮವಲ್ಲ , ಇದು ಮೇಲ್ಮನೆ ತೆಗೆದುಕೊಂಡ ಕ್ರಮ, ಎಲ್ಲಾ ನಿಯಮಗಳನ್ನು ಪಾಲಿಸಿಯೇ ನಿರ್ಧಾರ ಕೈಗೊಳ್ಳಲಾಗಿದೆ