Friday, October 18, 2024

Latest Posts

Corona ದಿಂದ ದೂರವಿರಲು ಸಂಪೂರ್ಣ ಲಸಿಕೆ ಒಂದೇ ದಾರಿ : ಕೆ ಸುಧಾಕರ್

- Advertisement -

ಬೆಂಗಳೂರ : ಲಸಿಕಾಕರಣದಿಂದ ಮಾತ್ರ ಕೋವಿಡ್ (covid) ನಿಂದ ದೂರವಿರಲು ಸಾಧ್ಯ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ.

ಈ ಉತ್ತರಾಯಣದ ಪುಣ್ಯ ಕಾಲದಲ್ಲಿ ಎಲ್ಲರಿಗೂ ಸಂತಸ, ಆರೋಗ್ಯ, ಸಮೃದ್ಧಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಇಂದು ಮೂರನೇ ಕೋವಿಡ್ ಲಸಿಕೆ ಪಡೆದಿದ್ದಾರೆ. 9 ತಿಂಗಳ ಹಿಂದೆ ಅವರು ಎರಡು ಡೋಸ್ ಪಡೆದಿದ್ದರು. ಬಿಎಂಸಿಆರ್‌ಐನಲ್ಲಿ ಈವರೆಗೆ 83,937 ಡೋಸ್ ಗಳನ್ನು ನೀಡಲಾಗಿದೆ. ಈ ಪೈಕಿ 420 ಬಾಣಂತಿ, 1,179 ಗರ್ಭಿಣಿಯರಿಗೆ ಲಸಿಕೆ ನೀಡಲಾಗಿದೆ. ಆರೋಗ್ಯ ಸಿಬ್ಬಂದಿ ಸೇರಿದಂತೆ ಅರ್ಹರು ಮುನ್ನೆಚ್ಚರಿಕೆ ಲಸಿಕೆಯನ್ನು ಪಡೆಯಬೇಕು. ಲಸಿಕಾಕರಣ ಒಂದರಿಂದಲೇ ರಕ್ಷಣೆ ಸಾಧ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದು, ಪ್ರಧಾನಿಗಳು ಕೂಡ ಅದನ್ನೇ ಹೇಳಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯೋಣ ಎಂದರು.

- Advertisement -

Latest Posts

Don't Miss