Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೇಕರಿ ಮಾಲೀಕನಿಗೆ ಹನಿಟ್ರ್ಯಾಪ್ ಮಾಡಲಾಗಿದೆ. ಈ ಮೂಲಕ ರಾಜಕೀಯ ನಾಯಕರಷ್ಟೇ ಅಲ್ಲದೇ, ಜನಸಾಮಾನ್ಯರೂ ಇಂಥ ವಿಷಯದಲ್ಲಿ ಎಚ್ಚರಿಕೆಯಿಂದಿರಬೇಕು ಎಂಬ ಸಂದೇಶ ರವಾನೆಯಾಗಿದೆ.
ನಗರದ ಘಂಟಿಕೇರಿಯ ಪಾಟೀಲ್ ಗಲ್ಲಿಯ ಮಧು ಎಂಬ ವ್ಯಕ್ತಿಗೆ ಹನಿಟ್ರ್ಯಾಪ್ ಆಗಿದ್ದು, ಯುವತಿಯ ಮೂಲಕ ಹನಿಟ್ರ್ಯಾಪ್ ಮಾಡಿ, ಕಿಡ್ನ್ಯಾಪ್ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ. ಈ ಮಧು ಪಾಟೀಲ್ ಗಲ್ಲಿಯಲ್ಲಿ ಬೇಕರಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಮಧುವನ್ನು ಕಿಡ್ನ್ಯಾಪ್ ಮಾಡಿ, 50 ಸಾವಿರಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.
ಮಧು ಮನೆಯವರಿಗೆ ಕಾಲ್ ಮಾಡಿ, 50 ಸಾವಿರ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದರೆ ಮಧು ಹೇಗೋ ಎಸ್ಕೇಪ್ ಆಗಿದ್ದು, ಆರೋಪಿಗಳ ಬಗ್ಗೆ ಪೊಲೀಸರ ಮುಂದೆ ಇಂಚಿಂಚು ಮಾಹಿತಿ ಬಿಚ್ಚಿಟ್ಟಿದ್ದ. ಹೀಗಾಗಿ ಪೊಲೀಸರು ಖದೀಮರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದೆ. ಹನಿಟ್ರ್ಯಾಪ್‌ಗೆ ಯತ್ನಿಸಿದ್ದ ನಾಲ್ಕು ಜನ ಖದೀಮರು ಸೇರಿ ಯುವತಿಯನ್ನು ಸಹ ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.