Friday, July 11, 2025

Latest Posts

ವಾಣಿಜ್ಯನಗರಿಯಲ್ಲಿ ಕಳ್ಳತನ: ಐವರ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಮೋಟಾರ್ ಸೈಕಲ್ ವಶ

- Advertisement -

Hubli News: ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನಗಳ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸರು ಐವರನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 4,02,250 ರೂ. ಮೌಲ್ಯದ 78 ಗ್ರಾಂ. ಚಿನ್ನ, 65 ಗ್ರಾಂ. ಬೆಳ್ಳಿ, ಮೋಟಾರ ಸೈಕಲ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತಿಚಿಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ಮನೆ ಕಳ್ಳತನ ಮಾಡಿಕೊಂಡು ಹೋಗಿರುವ ಪ್ರಕರಣಗಳು ದಾಖಲಾಗಿದ್ದವು, ಈ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹಳೇ ಹುಬ್ಬಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಎಚ್.ಯಳ್ಳೂರ, ಪಿಎಸ್ಐ ರೂಪಕ, ವಿ.ಎಚ್.ಚವಡಿ, ಪಿ.ಬಿ.ಕಾಳೆ ಹಾಗೂ ಸಿಬ್ಬಂದಿಗಳ ಕಾರ್ಯಚರಣೆಯಿಂದಾಗಿ ಆರೋಪಿಗಳನ್ನು ಪತ್ತೆ ಹಚ್ಚಿ ಚಿನ್ನಾಭರಣ ಹಾಗೂ ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರ‌ ಕಾರ್ಯಕ್ಕೆ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ‌

ವಿನಾಶ ಕಾಲೇ ವಿಪರೀತ ಬುದ್ಧಿ, ಇದು ಅವರ ಜೀವನದ ತಪ್ಪು ಹೆಜ್ಜೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ..?

ಸುಮಲತಾ ಜೊತೆ ಬಿಜೆಪಿ ಸೇರ್ಪಡೆಯಾದ ಮಾಜಿ ಬಿಗ್‌ಬಾಸ್ ಸ್ಪರ್ಧಿ..

ಮಗು ದತ್ತು ಪಡೆದ ಪ್ರಕರಣ: ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು..

- Advertisement -

Latest Posts

Don't Miss