Dharwad News: ಧಾರವಾಡ : ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಇವತ್ತಿನಿಂದ ಧಾರವಾಡ ಕ್ಷೇತ್ರದಲ್ಲಿ ನಮ್ಮ ಅಧೀಕೃತ ಪ್ರಚಾರ ಆರಂಭವಾಗಿದೆ ಎಂದಿದ್ದಾರೆ.
ಹತ್ತು ವರ್ಷ ಮೋದಿ ಹೇಳಿದ ಸುಳ್ಳುಗಳಿವೆ. ಅದನ್ನು ಜನರಿಗೆ ತಿಳಿಸುತ್ತೇವೆ. ನಾವು ಮಾಡಿದ ಕಾರ್ಯಕ್ರಮ ಹೇಳುತ್ತೇವೆ. 70 ವರ್ಷದ ಇತಿಹಾಸ ಹೇಳುತ್ತೇವೆ. ಜನರ ಮನೆ ಮನೆಗೆ ಹೋಗಿ ಹೇಳುತ್ತೇವೆ. ಪಕ್ಷದಲ್ಲಿ ಗುಂಪುಗಾರಿಕೆ ಇಲ್ಲ. ಯುವ ನಾಯಕರ ರಜತ್ ಸಹ ಟಿಕೆಟ್ ಕೇಳಿದ್ದರು. ಆಕಾಂಕ್ಷಿಗಳೆಲ್ಲ ಒಪ್ಪಿ ವಿನೋದ ಅಸೂಟಿ ಪರ ಬಂದಿದ್ದಾರೆ.ಒಂದು ಸರಪ್ರೈಸ್ ಫಲಿತಾಂಶ ಬರುತ್ತದೆ. ಎಲ್ಲರೂ ಜವಾಬ್ಧಾರಿ ವಹಿಸಿ ಕೆಲಸ ಮಾಡುತ್ತೇವೆ. ಕಾರ್ಯಕರ್ತರು, ಮುಖಂಡರು ಸೇರಿ ಕಾಂಗ್ರೆಸ್ ಗೆಲ್ಲುತ್ತೇವೆ ಎಂದು ಲಾಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎದುರಾಳಿ ಅಭ್ಯರ್ಥಿ ಬಹಳ ಸಲ ಗೆದ್ದವರು. ಕಳೆದ ನಾಲ್ಕು ಸಲ ಗೆದ್ದಿದ್ದಾರೆ. ಹೀಗಾಗಿ ಅವರ ಬಗ್ಗೆ ನಾವು ಗೇಲಿ ಮಾಡುವುದಿಲ್ಲ. ಆದರೆ ಈಗ ಇರುವ ಪರಿಸ್ಥಿತಿ ಬೇರೆ ಇದೆ. ಮಾಧ್ಯಮಗಳಲ್ಲಿ ಪ್ರಧಾನಿ ಮಿಂಚುತ್ತಲೇ ಇದಾರೆ. ಅವರು ಮಾಧ್ಯಮಗಳ ಮೂಲಕ ಪ್ರಚಾರ ಮಾಡುತ್ತಿದ್ದಾರೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.
ನನಗೆ ಮೋದಿ ಬೈಯೋಕೆ ಇಟ್ಟಿದ್ದಾರೆಂದು ಪ್ರಹ್ಲಾದ ಜೋಶಿ ಹೇಳಿಕೆ ವಿಚಾರದದ ಬಗ್ಗೆ ಪ್ರತಿಕ್ರಿಯಿಸಿದ ಲಾಡ್, ಇಲ್ಲಿಯವರೆಗೂ ನಾನು ಮೋದಿಯವರನ್ನ ವೈಯಕ್ತಿಕವಾಗಿ ಬೈದಿಲ್ಲ. ಮೋದಿ ಮತ್ತು ಜೋಶಿಯವರಿಗೆ ವ್ಯಕ್ತಿಗತವಾಗಿ ಬೈದಿಲ್ಲ. ಆ ಮಟ್ಟಕ್ಕೆ ನಾನು ಬೆಳೆದಿಲ್ಲ. ರಾಜಕೀಯ ಜೀವನದಲ್ಲಿ ವೈಯಕ್ತಿಕವಾಗಿ ಬೈದಿಲ್ಲ. ನಾವು ಕೇಳಿದ ಪ್ರಶ್ನೆಗೆ ಉತ್ತರ ಕೊಡಲು ಆಗಿಲ್ಲ. ಹೀಗಾಗಿ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ. ಪ್ರಮುಖರ ಸಭೆ ಮಾಡುತ್ತಿದ್ದೇವೆ. ಸಂಘಟಿತವಾಗಿ ಕೆಲಸ ಮಾಡಲು ಚರ್ಚೆ ಮಾಡಿದ್ದೇವೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಮೋದಿಯವರು ಪ್ರಧಾನಮಂತ್ರಿ ಆಗಲಿ ಎಂದು ಲಕ್ಷ್ಮೀನರಸಿಂಹ ಸ್ವಾಮಿಯಲ್ಲಿ ಕೇಳಿದ್ದೇನೆ: ಹೆಚ್.ಡಿ.ರೇವಣ್ಣ
ಹುಬ್ಬಳ್ಳಿ ಕೇಶ್ವಪುರ ಸಂಚಾರಿ ಪೋಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ