Saturday, April 19, 2025

Latest Posts

‘ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ.’

- Advertisement -

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ,  ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಅನ್ನೋದೇ ತಿಳಿಯದಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಸ್ಥಾನ‌ ಅಲಂಕರಿಸಿದ್ದಾರೆ ಅನ್ನೋ ಅನುಮಾನ ಇದೆ. ಸರ್ಕಾರದಲ್ಲಿ ಯಾರ ಕೈ ಮುಂದೆ ನಡೆಯುತ್ತಿದೆ ಅನ್ನೋ‌ದೇ ಗೊಂದಲ ಇದೆ. ಕಾಂಗ್ರೆಸ್ ಸರ್ಕಾರದಲ್ಲಿ‌ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಿಎಂ‌ ಪುತ್ರ ಯತೀಂದ್ರ ಅವರು ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಯತೀಂದ್ರ ಅವರು ಕಾಂಗ್ರೆಸ್ ಸರ್ಕಾರದ ಆಡಳಿತದ ಮತ್ತೊಂದು ಕೇಂದ್ರ ಬಿಂದು. ಸಿದ್ಧರಾಮಯ್ಯ ಅವರೇ ತಮ್ಮ ಆಡಳಿತ ನೋಡಿಕೊಳ್ಳುವಂತೆ ಯತೀಂದ್ರ ಅವರಿಗೆ ಹೇಳಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಕಾರ್ಯವೈಖರಿಯನ್ನ ಬದಲಾವಣೆ ಮಾಡಿಕೊಳ್ಳಬೇಕು. ಇಲ್ಲವೇ ರಾಜೀನಾಮೆ ಕೊಟ್ಟು ಮನೆಗೆ ತೆರಳಬೇಕು. ರಾಜ್ಯದಲ್ಲಿ‌ಪುರಸಭೆ, ನಗರಸಭೆಗೆ ನೀಡಿದ ಅನುದಾನ ವಾಪಸ್ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸಂಪೂರ್ಣ ದಿವಾಳಿಯಾಗಿದೆ. ಶಕ್ತಿ ಯೋಜನೆ ಬಿಟ್ಟು ಯಾವುದೇ ಯೋಜನೆ ಸಮರ್ಪಕವಾಗಿ ನಡೆಯುತ್ತಿಲ್ಲ. ರಾಜ್ಯದಲ್ಲಿ ಗುಂಪುಗಾರಿಕೆ ಆಡಳಿತ ನಡೆಯುತ್ತಿದೆ ಎಂದಿದ್ದಾರೆ.

ಇನ್ನು ವಿಜಯೇಂದ್ರ ರಾಜ್ಯಾಧ್ಯಕ್ಷ ವಿಚಾರವಾಗಿ ಅಸಮಾಧಾನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು,  ವಿಜಯೇಂದ್ರ ವಿಚಾರವಾಗಿ ಯಾವುದೇ ಅಸಮಾಧಾನಗಳಿಲ್ಲ. ಪಕ್ಷದ ವರಿಷ್ಠರೇ ಅವರನ್ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಯುವಕರಿಗೆ ಆದ್ಯತೆ ನೀಡುವ ಉದ್ದೇಶದಿಂದ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ‌ನೀಡಿದ್ದಾರೆ. ಅನೇಕ ಯುವ ಕಾರ್ಯಕರ್ತರು ವಿಜಯೇಂದ್ರ ಅವರನ್ನ ಸ್ವಾಗತ ಮಾಡಿದ್ದಾರೆ. ಅವರ ಅಧ್ಯಕ್ಷ ಸ್ಥಾನದ ಆಯ್ಕೆ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಲೋಕಸಭೆ ಚುನಾವಣೆಗೆ ನಮ್ಮ ಅಭಿವೃದ್ದಿ ವಿಚಾರಗಳೇ ನಮಗೆ ಶ್ರೀರಕ್ಷೆ. ಕಳೆದ 9 ವರ್ಷಗಳಿಂದ ಪ್ರಧಾನಿ‌ ಮೋದಿ ಅನೇಕ ಅಭಿವೃದ್ದಿ ಕೆಲಸ ಮಾಡಿದ್ದಾರೆ. ನಾಳೆ ಕೇಂದ್ರದಿಂದ ವೀಕ್ಷಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ವಿಪಕ್ಷ‌ ನಾಯಕನ‌ ಆಯ್ಕೆ ವಿಚಾರವಾಗಿ ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಸೀಟ್‌ಗಾಗಿ ಬಸ್‌ನಲ್ಲಿ ಚಪ್ಪಲಿಯಿಂದ ಹೊಡೆದಾಟ..

‘ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ’

‘ಅಧಿಕಾರವನ್ನು ಹಣದ ಲೂಟಿಗಾಗಿ ಬಳಸಿದ ಕುಮಾರಸ್ವಾಮಿಯವರಿಗೆ ಅಭಿವೃದ್ಧಿ ವಿಚಾರ ಅರ್ಥವಾಗುವಂಥದ್ದಲ್ಲ’

- Advertisement -

Latest Posts

Don't Miss