Friday, July 4, 2025

Latest Posts

weekend curfew ವೇಳೆ ksrtc ಗೆ ಇರಲ್ಲ ಅಡ್ಡಿ , ಆದ್ರೆ Bmtc ಬಸ್ ಸಂಚಾರ ಇರಲ್ಲ

- Advertisement -

,

ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಂಭದಿಸಿದ0ತೆ ಎಚ್ಚೆತ್ತಿದ್ದು,ಪ್ರಯಾಣಕ್ಕೆ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ವೇಳೆ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್​ಗೆ (Coronavirus) ಸರ್ಕಾರ ಹೇರಿರುವ ನಿಯಮ‌ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ ಹಾಗೂ ಹೊರ ರಾಜ್ಯದ ನಡುವೆ ಬಸ್ ಸಂಚಾರ ಇರಲಿದೆ. ಗೋವಾ, ಕೇರಳ, ‌ಮಹಾರಾಷ್ಟ್ರ ಹಾಗೂ ತಮಿಳುನಾಡಿನ  ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದುಕೆಎಸ್ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್​ ಮಾಹಿತಿ ನೀಡಿದ್ದಾರೆ.

ಬಿಎಂಟಿಸಿ ಸಂಚಾರಕ್ಕೆ ಬ್ರೇಕ್ :

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಮತ್ತು ಜನರು ಅನಾವಶ್ಯವಾಗಿ ಓಡಾಡುವುದನ್ನು ತಡೆಯಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ,ವೀಕೆಂಡ್ ಕರ್ಫ್ಯೂ ವೇಳೆ ಜನಸಾಮಾನ್ಯರಿಗೆ ಬಿಎಂಟಿಸಿ ಬಸ್‌ಗಳ ಸಂಚಾರ ಇರುವುದಿಲ್ಲ. ಅಗತ್ಯ ಸೇವೆಗಳಿಗೆ ಮಾತ್ರ ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ. ಶನಿವಾರ, ಭಾನುವಾರ ಪ್ರಯಾಣಕ್ಕೆ ಬಿಎಂಟಿಸಿ ಬಸ್ ಸಿಗುವುದಿಲ್ಲ. ತುರ್ತು, ಅಗತ್ಯ ಸೇವೆಗಳಿಗೆ ಮಾತ್ರ ವಿಶೇಷ ಬಸ್​ಗಳ ಸೇವೆ ಇರಲಿದೆ. ಈ ರೀತಿಯಲ್ಲಿ ಸರ್ಕಾರ ಬಸ್ ಸಂಚಾರಕ್ಕೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.

- Advertisement -

Latest Posts

Don't Miss