Friday, March 14, 2025

Latest Posts

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ; ಅರಗ ಜ್ಞಾನೇಂದ್ರ

- Advertisement -

www.karnatakatv.net : ಬಿಟ್ ಕಾಯಿನ್ ವಿಚಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿ ಯಾರೇ ಭಾಗಿಯಾಗಿದ್ದರೂ ಪತ್ತೆ ಮಾಡಿ ಶಿಕ್ಷೆಗೊಳಪಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ, ಈ ವಿಚಾರವಾಗಿ ಸಿಐಡಿ ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ನಾನು ಯಾವುದೇ ಹೇಳಿಕೆ ನೀಡಿದರೂ ತನಿಖೆಗೆ ತೊಂದರೆ ಆಗುತ್ತದೆ. ನಮ್ಮ ಪೊಲೀಸರು ಆಳಕ್ಕೆ ಹೋಗಿ ಮಾಹಿತಿ ತೆಗೆಯುತ್ತಾರೆಂದು ಹೇಳಿದ್ದಾರೆ. ವಿರೋಧಪಕ್ಷದ ನಾಯಕರು ಚುನಾವಣೆ ಸಂದರ್ಭದಲ್ಲಿ ಯಾರದ್ದೋ ಮುಖಕ್ಕೆ ಮಸಿ ಹಚ್ಚಲು ಹೋಗಬಾರದು. ಅವರು ಹಿಂದೆ ಮುಖ್ಯಮಂತ್ರಿ ಆಗಿದ್ದರು. ಇಂತಹ ವಿಚಾರಗಳನ್ನು ಪಕ್ಷಾತೀತವಾಗಿ ಯೋಚಿಸಬೇಕು. ಅಸ್ಪಷ್ಟವಾಗಿ ಹೇಳಿಕೆ ನೀಡುವುದು ಸರಿಯಲ್ಲ, ರಾಜಕಾರಣಿಗಳು ಕಾಂಗ್ರೆಸ್‌ನವರೇ ಇರಬಹುದು, ಬಿಜೆಪಿಯವರೇ ಆಗಿರಬಹುದು. ಅಪರಾಧಿಗಳನ್ನು ಕಾನೂನಿನ ಸೂತ್ರದಡಿ ತರಲಾಗುತ್ತದೆ. ತಪ್ಪು ಮಾಡಿದ್ದರೆ ಶಿಕ್ಷೆ ಆಗುತ್ತದೆ ಎಂದು ತಿಳಿಸಿದರು. ಈ ಪ್ರಕರಣದ ತನಿಖೆಯನ್ನು ಪರಿಣತಿ ಹೊಂದಿರುವ ಪೊಲೀಸರೇ ನಡೆಸುತ್ತಿದ್ದಾರೆ. ಆದ್ದರಿಂದ ಬಿಟ್ ಕಾಯಿನ್ ವಿಚಾರವಾಗಿ ಅಂತೆ-ಕoತೆಗಳನ್ನು ಕೇಳಿಕೊಂಡು ಮಾತನಾಡುವುದು ಸರಿಯಲ್ಲ. ಹಗರಣದಲ್ಲಿ ಪೊಲೀಸರೇ ಭಾಗಿಯಾಗಿದ್ದರೂ ಕೂಡ ಅವರಿಗೆ ಶಿಕ್ಷ ನೀಡಲಾಗುತ್ತದೆ ಎಂದರು.

- Advertisement -

Latest Posts

Don't Miss