Lakshmi Hebbalkar : ಇವರಿಗೆ ಸಿಗಲ್ಲ ಗೃಹಲಕ್ಷ್ಮಿ ಹಣ : ಸರ್ಕಾರದಿಂದ ಹೊಸ ರೂಲ್ಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿತರುವ ಬಗ್ಗೆ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೊಂದಾಗಿ 5 ಯೋಜನೆಗಳನ್ನು ಜಾರಿಗೆ ಕೂಡಾ ತಂದಿದೆ. ಈ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷೀ ಯೋಜನೆಯೂ ಒಂದು.

ರಾಜ್ಯದಲ್ಲಿ ಇಗಾಗಲೇ ಎಲ್ಲಾ ಮಹಿಳೆಯರು ಯೋಜನೆಗೆ ಅರ್ಜಿ ಸಲ್ಲಿಸಿದ್ದು ಈಗಾಗಲೇ 11 ತಿಂಗಳುಗಳಿಂದ ಪ್ರತೀ ತಿಂಗಳು 2000 ರೂಪಾಯಿಯಂತೆ ಹಣವನ್ನು ಗೃಹಿಣಿಯರು ಪಡೆಯುತ್ತಿದ್ದಾರೆ. ಆದ್ರೀಗ ಸರಕಾರ ಹೊಸ ರೂಲ್ಸ್ ಜಾರಿ ಮಾಡಿದೆ.

ಹೊಸ ನಿಯಮದಡಿ ಕೆಲವು ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗೋದಿಲ್ಲ. ಜಿಎಸ್‌ಟಿ, ಆದಾಯ ತೆರಿಗೆ ತುಂಬುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮೊದಲಿನಿಂದಲೂ ಜಿಎಸ್‌ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್‌ಟಿ ಹೊಂದಿದ್ದ 15000 ಜನರು ​ಅರ್ಜಿ ಹಾಕಿದ್ದರು. ಅವುಗಳನ್ನ ನಾವು ತಿರಸ್ಕಾರ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇಡೀ ರಾಜ್ಯದಲ್ಲಿ ಶ್ರೀಮಂತರು, ಜಿಎಸ್‌ಟಿ ಇದ್ದವರು ಸೇರಿ ಒಟ್ಟು 1ಕೋಟಿ 58ಲಕ್ಷ ಕುಟುಂಬಗಳಿವೆ. ಇಂದಿಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ.

ಜೂನ್ ತಿಂಗಳದ್ದು ಕೂಡ 89 ಜನರಿಗೆ ತಲುಪಿಲ್ಲ. ತಾಂತ್ರಿಕ ದೋಷವನ್ನ ಈಗಾಗಲೇ ಸರಿ ಮಾಡಿದ್ದೇವೆ. ಜುಲೈ ಮತ್ತು ಆಗಷ್ಟ್ ತಿಂಗಳದ್ದು ಕೂಡ ಸಿಎಂ ಜೊತೆಗೆ ಚರ್ಚೆ ಮಾಡಿದ್ದೇನೆ. ಇನ್ನೊಂದು ವಾರದಲ್ಲಿ ಎರಡು ತಿಂಗಳ ಹಣ ಕೂಡ ಜಮಾ ಆಗಲಿದೆ ಎಂದು ಹೇಳಿದ್ರು.

About The Author