ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ: ಡಿ.ಕೆ.ಶಿವಕುಮಾರ್

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಾಮಿ, ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಇಂದು ಗೃಹಕಚೇರಿಯಲ್ಲಿ ಡಿಸಿಎಂ ಡಿಕೆಶಿ ಕೂಡ ಸುದ್ದಿಗೋಷ್ಠಿ ನಡೆಸಿದ್ದರು.

ಈ ವೇಳೆ ಮಾತನಾಡಿದ ಡಿಕೆಶಿ, ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ. ಕುಮಾರಸ್ವಾಮಿ ಅವರಿಗೆ ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ರೆ ಬರಲ್ಲ ಎಂದು ಡಿಕೆಶಿ ವ್ಯಂಗ್ಯವಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದೆ. ಕಾನೂನು ಪ್ರಕಾರ ಏನು ಆಗಬೇಕೋ, ಅದು ಆಗುತ್ತದೆ. ಹಾಗೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಅವರ ಜತೆಗೆ ಇದ್ದವರು ಯಾರು? ಯಾರು ಯಾರಿಗೆ ಕರೆ ಮಾಡಿದ್ರು ಅನ್ನೋದನ್ನ ಅವರನ್ನೇ ಕೇಳಬೇಕು. ಇದು ಹಳೇ ವಿಡಿಯೋ ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆ. ಅಂದರೆ ಪ್ರಜ್ವಲ್ ವಿಡಿಯೋ ಬಗ್ಗೆ ರೇವಣ್ಣ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಗುಸುಗುಸು ಚರ್ಚೆಯಾಗಿದ್ದು, ಈಗ ಬಹಿರಂಗವಾಗಿದೆ. ಬಿಜೆಪಿಯವರು ಈ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಎನ್ನುವುದು ಎಲ್ಲರ ಪ್ರಶ್ನೆ ಎಂದು ಡಿಕೆಶಿ ಹೇಳಿದ್ದಾರೆ.

ಪ್ರಜ್ವಲ್ ಪೆನ್‌ಡ್ರೈವ್ ಕೇಸ್‌ನ ಹೊಣೆಯನ್ನು ಬಿಜೆಪಿ ಮೇಲೆ ಹೊರಿಸುತ್ತಿರುವುದು ಹಾಸ್ಯಾಸ್ಪದ: ಚೇತನ್ ಅಹಿಂಸಾ

ನಿಮ್ಮ ಮಕ್ಕಳು ಹೆಚ್ಚು ಮೊಬೈಲ್ ಅಡಿಕ್ಟ್ ಆಗಿದ್ದರೆ ಗಮನಹರಿಸಿ: ಪೋಷಕರಿಗೆ ಪೊಲೀಸ್ ಅಧಿಕಾರಿಗಳ ಎಚ್ಚರಿಕೆ

ಜನಮನ್ನಣೆ ಗಳಿಸಿದ ಜೆ.ಪಿ.ನಡ್ಡಾ ಅವರ ರೋಡ್ ಷೋ

About The Author