Shimogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ಬಗ್ಗೆ ಜನ ಸಂಪೂರ್ಣ ವಿಶ್ವಾಸ ಕಳೆದುಕ“ಂಡಿದ್ದಾರೆ. ನಾಡಿನ ಜನತೆಯ ಪಾಲಿಗೆ ಸರ್ಕಾರ ಬದುಕಿದ್ದು ಸತ್ತಂತಾಗಿದೆ. ಸಿಎಂ ಅಸಹಾಯಕರಾಗಿದ್ದಾರೆ. ಗ್ಯಾರಂಟಿಗಳಿಗೆ ಹಣ ಕ್ರೂಢೀಕರಿಸಲು ಸಾಧ್ಯವಾಗದೇ, ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಮುಖೇಣ ಬರೆ ಎಳೆಯುತ್ತಿದ್ದಾರೆ ಎಂದು ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿಗಾಗಿ ಹಣ ಕೂಡಿಸಲು ಯಾವ ಮಟ್ಟಕ್ಕಿಳಿಯಲು ಕೂಡ ಸರ್ಕಾರ ಹೇಸುತ್ತಿಲ್ಲ. ಬಡವರ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಏಕೆಂದರೆ ಇವತ್ತು ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಇದೇ ಸತ್ಯ ಎಂದು ವಿಜಯೇಂದ್ರ ಹೇಳಿದ್ದಾರೆ.
ಹಾಸನದಲ್ಲಿ ಹಲವರು ಹೃದಯಾಘಾತದಿಂದ ಪ್ರಾಣ ಕಳೆದುಕ“ಂಡಿದ್ದಾರೆ. ವಿರೋಧ ಪಕ್ಷದ ನಾಯಕರು ಕೂಡ ಹಾಸನಕ್ಕೆ ಭೇಟಿ ನೀಡಿ, ಈ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಆದರೆ ಉಸ್ತುವಾರಿ ಸಚಿವರಿಗೆ ಹಾಸನಕ್ಕೆ ಭೇಟಿ ನೀಡಲು ಕೂಡ ಸಮಯವಿಲ್ಲವೆಂದರೆ ಅರ್ಥವೇನು ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಗಲಾಟೆಗಳು ನಡೆಯುತ್ತಿರುವ ಬಗ್ಗೆ ಮಾತನಾಡಿರುವ ವಿಜಯೇಂದ್ರ, ರಾಜ್ಯಸರ್ಕಾರ ಇಂಥ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹಾಗಾಗಿ ದೇಶದ್ರೋಹಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪೋಲೀಸರನ್ನೇ ಬೆದರಿಸುವ ಷಡ್ಯಂತ್ರ ನಡೆಯುತ್ತಿದೆ. ಕೋಮುಗಲಭೆಗಳು ವ್ಯವಸ್ಥಿತವಾಗಿರುವಂಥ ಷಡ್ಯಂತ್ರ. ಇಂಥ ಕೃತ್ಯಗಳ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗ“ಳ್ಳದ ಪರಿಣಾಮ ಇಂಥ ಕೃತ್ಯಗಳು ಹೆಚ್ಚಾಗುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.