Saturday, July 27, 2024

Latest Posts

“ಇದು ವಿಕಸಿತ ಭಾರತ ಅಲ್ಲ, ವಿನಾಶಕಾರಿ ಭಾರತದ ಬಜೆಟ್”

- Advertisement -

Political News: ಇಂದು ಕೇಂದ್ರ ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಟೀಕೆ ಮಾಡಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ಅವರು ನಿರ್ಮಿಸಿರುವ ‘‘ವಿನಾಶಕಾರಿ ಭಾರತ’’ದ ವಾಸ್ತವವನ್ನು ಬಚ್ಚಿಟ್ಟು ‘‘ವಿಕಸಿತ ಭಾರತ’’ ಎಂಬ ಭ್ರಮಾಲೋಕವನ್ನು ದೇಶದ ಜನತೆಗೆ ಮಾರಾಟ ಮಾಡಲು ಪ್ರಯತ್ನಿಸಿದ್ದಾರೆ.

ಬಡವರು, ಮಹಿಳೆಯರು, ಯುವಕರು ಮತ್ತು ರೈತರನ್ನೊಳಗೊಂಡ ನಾಲ್ಕು ‘‘ಜಾತಿ’’ಗಳ ಅಭಿವೃದ್ದಿಯ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ನಂಬಿಕೆ ಇಟ್ಟಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಇದನ್ನೆ ‘’ವಿಕಸಿತ ಭಾರತ’’ದ ಕನಸು ಎಂದು ಅವರು ಹೇಳಿಕೊಂಡಿದ್ದಾರೆ. ನರೇಂದ್ರ ಮೋದಿಯರ ಹತ್ತು ವರ್ಷಗಳ ಆಡಳಿತದಲ್ಲಿ ಕಷ್ಟ,ನಷ್ಟ, ದಮನ, ದೌರ್ಜನ್ಯಕ್ಕೀಡಾಗಿರುವುದು ಇದೇ ಬಡವರು, ಮಹಿಳೆಯರು, ಯುವಕರು ಮತ್ತು ರೈತರು. ಈ ಸಮುದಾಯಗಳ ಪಾಲಿಗೆ ಮೋದಿಯವರ ಹತ್ತು ವರ್ಷಗಳ ಆಡಳಿತ ‘‘ವಿಕಸಿತ ಭಾರತ’’ ಅಲ್ಲ ಅದು ‘‘ವಿನಾಶಕಾರಿ ಭಾರತ’’ ಎಂದು ಟೀಕಿಸಿ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ..

ದೇಶದ ಸಾರ್ವಭೌಮತೆ ಇರಬೇಕು. ಆದರೆ ರಾಜ್ಯಗಳಿಗೆ ಅವರ ಪಾಲು ಕೊಡಬೇಕು. ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಗಳ ಪಾಲನ್ನು ಕೊಡುತ್ತಿಲ್ಲ. ರಾಯಚೂರು ಜಿಲ್ಲೆಗೆ ಎಮ್ಸ್ ಸ್ಥಾಪನೆಗೆ ಒತ್ತಾಯಿಸಿದ್ದೆವು, ಪ್ರಯೋಜನ ಆಗಿಲ್ಲ. ನಮ್ಮಿಂದ 4 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡುವ ಕೇಂದ್ರ ಸರ್ಕಾರ ನಮಗೆ, ನಮ್ಮ ನಾಡಿಗೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಅಖಂಡ ಭಾರತ, ಅಖಂಡ ಕರ್ನಾಟಕ ಉಳಿಯಬೇಕು‌. ಇದಕ್ಕಾಗಿ ರಾಜ್ಯಗಳ ಪಾಲನ್ನು ಚಾಚೂ ತಪ್ಪದೆ ಕೊಡಬೇಕು.

ಬಿಜೆಪಿ ಆಳ್ವಿಕೆಯ ಈ ‘‘ವಿನಾಶಕಾರಿ ಭಾರತ’’ದಲ್ಲಿ ದೇಶದ ಎಲ್ಲ ಜಾತಿ-ಧರ್ಮಗಳ ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ವಿಶೇಷವಾಗಿ ದಲಿತ ಹಿಂದುಳಿದ ಜಾತಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳು ದಮನಕ್ಕೀಡಾಗಿದ್ದಾರೆ, ಅವರ ಸಾಮಾಜಿಕ ಮತ್ತು ಆರ್ಥಿಕ ಬದುಕು ಅಧ:ಪತನಗೊಂಡಿದೆ. ಈ ದೃಷ್ಟಿಯಲ್ಲಿ ನಾವಿಂದು ಪ್ರಜಾಪ್ರಭುತ್ವದ ‘‘ಅಮೃತ ಕಾಲ’’ದಲ್ಲಿ ಇಲ್ಲ, ‘‘ಮೃತ ಕಾಲ’’ದಲ್ಲಿದ್ದೇವೆ ಎಂದು ಸಿದ್ದರಾಮಯ್ಯ ಬಜೆಟ್ ಬಗ್ಗೆ ಟೀಕೆ ಮಾಡಿದ್ದಾರೆ.

ಇದೇ ರೀತಿ ಸಾಲು ಸಾಲು ಟ್ವೀಟ್ ಮಾಡಿ ಬಜೆಟ್ ಬಗ್ಗೆ ಸಿದ್ದರಾಮಯ್ಯ ಟೀಕೆ ಮಾಡಿದ್ದು, ಆ ಟ್ವೀಟ್ ಇಂತಿದೆ.

‘ಜ್ಞಾನ ವ್ಯಾಪಿ ಎಂಬ ಹೆಸರಿನ ಮಸೀದಿ ಎಲ್ಲಿಯೂ ಇಲ್ಲ. ಔರಂಗಜೇಬ್ ಒಡೆದ ದೇವಸ್ಥಾನ ಅದು.’

2024ರ ಕೇಂದ್ರ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

ತಮ್ಮ ಅಧಿಕಾರಾವಧಿಯ ಯೋಜನೆಗಳ ಸಾಧನೆ ವಿವರಿಸಿದ ಸಚಿವೆ ನಿರ್ಮಲಾ ಸೀತಾರಾಮನ್

- Advertisement -

Latest Posts

Don't Miss