Monday, December 23, 2024

Latest Posts

ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್: ಮಾಜಿ ಸಿಎಂ ಕುಮಾರಸ್ವಾಮಿ

- Advertisement -

Political News: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಬಜೆಟ್ ವಿಕಾಸಪೂರಕ ಮತ್ತು ಅಭಿವೃದ್ಧಿಪರ ಬಜೆಟ್ ಅಂದಿದ್ದಾರೆ.

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ. ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕಮಗಳು ಸ್ವಾಗತಾರ್ಹ.

ಹಾಗೆಯೇ ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ ಮನ್ನಣೆ ಹಾಕಲಾಗಿದೆ. ನನ್ನ ಅಭಿಪ್ರಾಯದ ಪ್ರಕಾರ ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್ ಹೇಳಿಕೆ ಖಂಡನೀಯ- ಬಿ ವೈ ವಿಜಯೇಂದ್ರ…

“ಇದು ವಿಕಸಿತ ಭಾರತ ಅಲ್ಲ, ವಿನಾಶಕಾರಿ ಭಾರತದ ಬಜೆಟ್”

ಕೇಂದ್ರ ಬಜೆಟ್‌ನ್ನು ಹಾಡಿಹೊಗಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

- Advertisement -

Latest Posts

Don't Miss