Saturday, April 5, 2025

Latest Posts

ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೇ ಇದು‌: ಪ್ರತಾಪ್ ಸಿಂಹ ವಿರುದ್ಧ ಗುಂಡೂರಾವ್ ಕಿಡಿ

- Advertisement -

Political News: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಮದ್ದೂರಿನ ನವೀನ್ ಕುಮಾರ್ ಅವರನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿದ್ದಾರೆ. 

ಈ ಬಗ್ಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ಇಂಥವರನ್ನು ಬಿಜೆಪಿಗರು ಗೆಳೆಯಲು ಅಂತಾ ಹೇಳಿದಾಗ, ಬಿಜೆಪಿಗರು ಎಂಥವರು ಅಂತಾ ನಾವು ತಿಳಿಯಬೇಕಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇನ್ನು ಸಚಿವ ದಿನೇಶ್ ಗುಂಡೂರಾವ್ ಕೂಡ ಈ ಬಗ್ಗೆ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಮದ್ದೂರಿನ ನವೀನ್ ಕುಮಾರ್ ತನ್ನ ಗೆಳೆಯ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೊಂಡಿದ್ದಾರೆ. ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೆ ಇದು‌. ಸಮಾಜದ ಶಾಂತಿ ಕದಡುವ, ಕೊಲೆ, ಸುಲಿಗೆಯಂತಹ ವಿದ್ವಂಸಕ ಕೃತ್ಯ ನಡೆಸುವವರೆಲ್ಲಾ ಬಿಜೆಪಿಯ ಗರ್ಭಗುಡಿಯಲ್ಲೇ ಇರುತ್ತಾರೆ‌ ಎಂಬುವುದಕ್ಕೆ ಇದೊಂದು ನಿದರ್ಶನ. ದಿಟ್ಟ ಪತ್ರಕರ್ತೆಯಾಗಿದ್ದ ಗೌರಿ ಲಂಕೇಶ್‌ರವರನ್ನು ನಿಷ್ಕಾರಣವಾಗಿ ಕೊಲೆಗೈದ ಆರೋಪಿಯ ಕೃತ್ಯವನ್ನು ಬಿಜೆಪಿಯ‌ ಮಾಜಿ ಸಂಸದರು ಖಂಡಿಸುವ ಬದಲು, ಆ ಆರೋಪಿಯ ಹೆಗಲ ಮೇಲೆ ಕೈ ಹಾಕಿ ಫೋಟೋ ತೆಗೆಸಿಕೊಂಡರೆ ಸಮಾಜಕ್ಕೆ ಯಾವ ಸಂದೇಶ ಹೋಗುತ್ತದೆ.? ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. 

- Advertisement -

Latest Posts

Don't Miss