Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಆಡಳಿತಕ್ಕೆ ಬಂದ ನಂತರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಸಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. 40 ಕ್ಕೂ ಹೆಚ್ಚು ಶಾಸಕರು ಬಹಿರಂಗವಾಗಿ ಹೇಳಿಕೆ ಮಾಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. 75 ವರ್ಷದಲ್ಲಿ ಯಾವ ಸರ್ಕಾರದ ಮೇಲೂ ಈ ಮಟ್ಟದ ಪರಿಸ್ಥಿತಿ ಬಂದಿರಲಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರದ ಮೇಲೆ ಬಂದಿದೆ ಎಂದು ಕಾರಜೋಳ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಯತೀಂದ್ರ ಅವರು ವಿಧಾನಸೌಧದ ಹೊರಗಡೆ ಸರ್ಕಾರ ನಡೆಸುತ್ತಿದ್ದಾರೆ. ತಮ್ಮ ಮಗನಿಗೆ ಆಡಳಿತ ನೋಡಿಕೊಳ್ಳಲು ಹೇಳಿದ್ದಾರಂತೆ. ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತ. ಅಧಿಕಾರಕ್ಕೆ ಬರುವ ಮುಂಚೆ ಐದು ಗ್ಯಾರಂಟಿ ಹೇಳಿದ್ರು ಈವರೆಗೆ ಜಾರಿಯಾಗಿಲ್ಲ. ಅಭಿವೃದ್ಧಿ ಕಾರ್ಯ ನಿಲ್ಲಿಸಿ ಆಡಳಿತ ನಡೆಸೋದು ಸರಿಯಲ್ಲ. ಸಾಮಾಜಿಕ ಕಳಕಳಿ ಯೋಜನೆ ಜಾರಿಯಾಗಬೇಕು. ಸಿದ್ದರಾಮಯ್ಯ ಅವರಿಗೆ ನೈತಿಕತೆ ಉಳಿದಿಲ್ಲ ಎಂದಿದ್ದಾರೆ.
ನಮ್ಮ ಸರ್ಕಾರದ ಬಗ್ಗೆ ಸುಳ್ಳು ಆರೋಪ ಮಾಡಿದ್ದರು. 40% ಆರೋಪ ಬಹಿರಂಗ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಗ್ಯಾರಂಟಿಗಳನ್ನ ನಂಬಿ ಜನರು ಮೋಸ ಹೋಗಿದ್ದಾರೆ. ಸಿದ್ಧರಾಮಯ್ಯ ಅವರೇ ವಿಧಾನಸೌಧದಿಂದ ಆಡಳಿತ ಮಾಡಿ. ಹಾದಿಬೀದಿಯಲ್ಲಿ ಸಂತೆ ಮಾಡುತ್ತಾ ಆಡಳಿತ ನಡೆಸೋದು ಸರಿಯಲ್ಲ. ಸ್ವಾತಂತ್ರ್ಯ ಬಂದ ನಂತರ ಈ ಮಟ್ಟದ ಕೆಟ್ಟ ಸರ್ಕಾರ ಯಾವಾಗಲೂ ಬಂದಿಲ್ಲ. ಸಿದ್ದರಾಮಯ್ಯ ಆತ್ಮಸಾಕ್ಷಿಯಾಗಿ ಆಡಳಿತ ಮಾಡಲಿ. ಅಧಿವೇಶನ ಪ್ರಾರಂಭ ಆಗಲಿ ಅದಕ್ಕೆ ಉತ್ತರ ನೀಡುತ್ತೇವೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ.
‘ಅಧಿಕಾರವನ್ನು ಹಣದ ಲೂಟಿಗಾಗಿ ಬಳಸಿದ ಕುಮಾರಸ್ವಾಮಿಯವರಿಗೆ ಅಭಿವೃದ್ಧಿ ವಿಚಾರ ಅರ್ಥವಾಗುವಂಥದ್ದಲ್ಲ’