Mysuru News: ಪ್ರತೀ ವರ್ಷ ಮೈಸೂರು ದಸರಾವನ್ನು ಖ್ಯಾತನಾಮರು ಉದ್ಘಾಟಿಸುತ್ತಾರೆ. ಅದೇ ರೀತಿ ಈ ಬಾರಿ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ.
ಸೆಪ್ಟೆಂಬರ್ 22ರಿಂದ ನವರಾತ್ರಿ ಶುರುವಾಗಲಿದ್ದು, ಅಕ್ಟೋಬರ್ 2ರವೆಗೆ ವಿಜಯದಶಮಿ ದಸರಾ ನಡೆಯಲಿದೆ. ಈ ವೇಳೆ ಮೈಸೂರಿನಲ್ಲಿ ಅದ್ಧೂರಿ ದಸರಾ ಮಹೋತ್ಸವ ನಡೆಯಲಿದೆ. ವಿಶ್ವವಿಖ್ಯಾತ ದಸರಾದ ಜಂಬೂ ಸವಾರಿ, ಸೇರಿ ಹಲವು ಕಾಾರ್ಯಕ್ರಮಗಳನ್ನು ಕಣ್ತುಂಬಿಕ“ಳ್ಳಲು ಜನ ದೇಶದ ನಾನಾ ಭಾಗಗಳಿಂದ, ವಿದೇಶಗಳಿಂದಲೂ ಬರುತ್ತಾರೆ. ಇಂಥ ನಾಡಹಬ್ಬವನ್ನು ಈ ಬಾರಿ ಯಾರು ಉದ್ಘಾಟಿಸಲದ್ದಾರೆ ಎಂಬ ಕುತೂಹಲ ಎಲ್ಲರಲ್ಲಿತ್ತು.
ಆದರೆ ಇದೀಗ ಆ ಕುತೂಹಲಕ್ಕೆ ಬ್ರೇಕ್ ಬಿದ್ದಿದ್ದು, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಈ ಬಾರಿ ನಾಡಹಬ್ಬ ದಸರಾವನ್ನು ಉದ್ಘಾಟಿಸಲಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಿಎಂ ಸಿದ್ದರಾಮಯ್ಯ, ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು.
ಬಾನು ಮುಷ್ತಾಕ್ ಅವರ ಕೃತಿ ಎದೆಯ ಹಣತೆಗೆ ಬೂಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್ ಅವರು ಪ್ರಗತಿಪರ ಚಿಂತಕಿಯೂ ಆಗಿದ್ದಾರೆ. ಅವರಿಂದಲೇ ದಸರಾ ಉದ್ಘಾಟಿಸಿ, ಅವರ ಸಾಧನೆಯನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದಿದ್ದಾರೆ.




