ಈ ಬಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಕೈಬಿಟ್ಟಿದೆ. ಪ್ರಸಕ್ತ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಹಿನ್ನೆಲೆಯಲ್ಲಿ, ಈ ಬಾರಿ 70 ಮಂದಿ ಗಣ್ಯರು ಪ್ರಶಸ್ತಿಗೆ ಆಯ್ಕೆಯಾಗಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಸಚಿವರು ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಬಾರಿ ರಾಜೋತ್ಸವ ಪ್ರಶಸ್ತಿಗಾಗಿ ಯಾವುದೇ ಅರ್ಜಿ ಆಹ್ವಾನ ಇಲ್ಲ ಎಂದು ತಿಳಿಸಿದ್ದಾರೆ. ಬದಲಾಗಿ, ಸರ್ಕಾರವು ಉನ್ನತ ಮಟ್ಟದ ಸಲಹಾ ಸಮಿತಿಯನ್ನು ರಚಿಸಿದ್ದು, ಈ ಸಮಿತಿಯೇ ಪ್ರಶಸ್ತಿ ಪುರಸ್ಕೃತರನ್ನ ಆಯ್ಕೆಮಾಡಲಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಬರುತ್ತಿದೆ. ಈ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದೆ. 70 ಮಂದಿ ಅರ್ಹ ಸಾಧಕರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಅಚ್ಚರಿಯ ವಿಚಾರವೆಂದರೆ, ಇದೇ ಮೊದಲ ಬಾರಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಕೈಬಿಡಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.
70 ಮಂದಿ ಅರ್ಹ ಗಣ್ಯರಿಗೆ ಈ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಆಯ್ಕೆ ಸಮಿತಿಯು ಅರ್ಹರ ಪಟ್ಟಿ ಸಿದ್ಧಪಡಿಸಲಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳ ಬಗ್ಗೆ ನಿರ್ಧಾರವನ್ನು ಆಯ್ಕೆ ಸಮಿತಿಯೇ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣೆಗೆಗಳನ್ನು ಒಳಗೊಂಡಿರಲಿದೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಯು ₹5 ಲಕ್ಷ ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಗಳನ್ನು ಒಳಗೊಂಡಿರಲಿದೆ. ಈ ಬಾರಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಲ್ಲದಿದ್ದರೂ, ಸರ್ಕಾರವು ನೇರವಾಗಿ ಅರ್ಹ ಸಾಧಕರನ್ನು ಗುರುತಿಸಿ, ಸಮಿತಿಯ ಶಿಫಾರಸಿನ ಮೇರೆಗೆ ಪ್ರಶಸ್ತಿ ನೀಡಲಿದೆ. ಈ ಕ್ರಮವು ರಾಜ್ಯೋತ್ಸವ ಪ್ರಶಸ್ತಿಯ ಗುಣಮಟ್ಟವನ್ನು ಕಾಪಾಡಲು ಸಹಾಯಕವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರದಿ : ಲಾವಣ್ಯ ಅನಿಗೋಳ

