Political News: ಚಳ್ಳಕೆರೆಯಲ್ಲಿಂದು ಶಾಸಕ ರಘುಮೂರ್ತಿಯವರ ಮಗಳ ಮದುವೆಯಲ್ಲಿ ಭಾಗವಹಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ. ನಾವು ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ₹1,000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಸಿದ್ಧವಾಗಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಬಸನಗೌಡ ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ? ಇದು ಕಪ್ಪು ಹಣ ಇರಬಹುದಲ್ಲವೇ? ಭ್ರಷ್ಟಾಚಾರದ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ. ಇಂತಹ ಯತ್ನಾಳ್ ಅವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಉಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ಒಂದೆರಡು ದಿನಗಳಿಂದ ನಿರೀಕ್ಷೆಗೂ ಮೀರಿ ಮಳೆ ಬಿದ್ದಿದ್ದು ಸ್ವಲ್ಪ ಪ್ರಮಾಣದಲ್ಲಿ ಸಂಚಾರ ಸಮಸ್ಯೆ ಕಂಡುಬರುತ್ತಿದೆ. ಇದನ್ನು ಸೂಕ್ತವಾಗಿ ನಿರ್ವಹಿಸುವ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.