Tuesday, April 22, 2025

Latest Posts

ಮೆಟ್ರೋ ದರ ಇಳಿಕೆ ಮಾಡಲು ಸಿಎಂ ನಿರ್ಧಾರದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಹೀಗಿತ್ತು.

- Advertisement -

Political News: ಬೆಂಗಳೂರಿನಲ್ಲಿ ಮೆಟ್ರೋ ದರ ಏರಿಕೆಯಾಗಿದ್ದು, ನಿನ್ನೆಯಿಂದ ಮೆಟ್ರೋ ಖಾಲಿ ಖಾಲಿಯಾಗಿದೆ. ಪ್ರತಿದಿನ ಜನಜಂಗುಳಿಯಿಂದ ತುಂಬಿರುತ್ತಿದ್ದ ಮೆಟ್ರೋ ಬಳಿ ಜನ ಬರುವುದನ್ನೇ ನಿಲ್ಲಿಸಿದ್ದಾರೆ. ಮೆಟ್ರೋದಲ್ಲಿ ಹೋಗುವ ಬದಲು, ಕ್ಯಾಬ್ ಮಾಡಿಕೊಂಡು ಹೋಗುವುದೇ ಲೇಸು. ಅದರಲ್ಲಾದರೂ ಅಷ್ಟೇ ಹಣ ನೀಡಿ, ಆರಾಮವಾಗಿ ಹೋಗಬಹುದು ಅಂತಾ ಹೇಳ್ತಿದ್ದಾರೆ.

ಈ ಮೂಲಕ ಮೆಟ್ರೋ ದರ ಹೆಚ್ಚಳದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಈ ಕಾರಣಕ್ಕೆ ಕೊಂಚ ಮೆಟ್ರೋ ದರ ಇಳಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.

ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಈ ಟ್ವೀಟ್‌ಗೆ ರೀಟ್ವೀಟ್ ಮಾಡಿರುವ ಜೋಶಿ, ಬಿಎಂಆರ್ ಸಿಎಲ್ ’ನಮ್ಮ ಮೆಟ್ರೋ’ ದರ ಹೆಚ್ಚಳ ಬಳಿಕ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ಆರೋಪ ಹೊರಸಿದ್ದರು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಯೂಟರ್ನ್ ಹೊಡೆಯುವ ಮೂಲಕ ಟಿಕೆಟ್ ದರ ಕಡಿಮೆ ಮಾಡಿ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರದತ್ತ ಆರೋಪ ಮಾಡುವ ಸಿದ್ದರಾಮಯ್ಯನವರು, ಸುಳ್ಳು ಹೇಳುವುದನ್ನು ಬಿಟ್ಟು ‌ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಿ ಎಂದಿದ್ದಾರೆ.

- Advertisement -

Latest Posts

Don't Miss