www.karnatakatv.net : ಕೊರೊನಾ ಮಹಾಮಾರಿ ಇಂದ ಪರೀಕ್ಷೆಯನ್ನು ನಡೆಸದೆ ಪಿಯುಸಿ ಫಲಿತಾಂಶ ಪ್ರಕಟಿಸಿದ್ದರು ಆದರೆ ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತರ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಬೇಕೆಂದು ಹೇಳಿದ್ದಾರೆ. ಪಿಯು ಪರೀಕ್ಷಾ ಶುಲ್ಕ ಮರುಪಾವತಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂತಿರುಗಿಸುವ ಯಾವುದೇ ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬಾರಿ ಪರೀಕ್ಷೆ ಬರೆದಿದ್ದ ಎಲ್ಲಾ ವಿದ್ಯಾರ್ಥಿಗಳನ್ನೂ ಪಾಸು ಮಾಡಿರುವುದರಿಂದ ಉನ್ನತ ಶಿಕ್ಷಣ ಪ್ರವೇಶಕ್ಕೆ ಸಹಜವಾಗಿಯೇ ಸಂಖ್ಯೆ ಹೆಚ್ಚಾಗಲಿದೆ. ಈ ಸಂಬಂಧ ಈಗಾಗಲೇ ಉನ್ನತ ಶಿಕ್ಷಣ ಇಲಾಖೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ ನಾರಾಯಣ ಅವರೊಂದಿಗೆ ಮಾತುಕತೆ ನಡೆಸಲಾಗಿದೆ.