BREAKING NEWS: ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಕೊಲೆ ಬೆದರಿಕೆ

ನವದೆಹಲಿ: ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಅವರ ಕುಟುಂಬವನ್ನು ಕೊಲ್ಲುವುದಾಗಿ ಅನಾಮಧೇಯ ವ್ಯಕ್ತಿಯೊಬ್ಬ ಸೋಮವಾರ ಮುಂಬೈನ ಆಸ್ಪತ್ರೆಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಳಿಗ್ಗೆ 10.30 ರ ಸುಮಾರಿಗೆ ಗಿರ್ಗಾಂವ್ ಪ್ರದೇಶದ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್ಲೈನ್ ಸಂಖ್ಯೆಗೆ ವ್ಯಕ್ತಿ ಮೂರರಿಂದ ನಾಲ್ಕು ಕರೆಗಳನ್ನು ಮಾಡಿದ್ದಾನೆ ಎಂದು ಅವರು ಹೇಳಿದರು.

ಕರೆಗಳ ಬಗ್ಗೆ ಮಾಹಿತಿ ಪಡೆದ ನಂತರ, ಮುಂಬೈ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕರೆ ಮಾಡಿದ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥ ಎಂದು ತಿಳಿದುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ.

About The Author