Hubballi News: ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 31, 22, 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂರು ಪ್ರತ್ಯೇಕ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ.
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಾಜಿಬಾನಪೇಟೆಯ ಗೌಳಿಗಲ್ಲಿ ನಿವಾಸಿ ರಾಜು ಧರ್ಮದಾಸ ಅವರನ್ನು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಇನ್‌ಸ್ಪೆಕ್ಟರ್ ಎಂ.ಎಂ.ತಹಶೀಲ್ದಾರ್, ಪಿಎಸ್‌ಐ ಮಾರುತಿ ಆರ್, ಎಎಸ್‌ಐ ವೈ.ಎಫ್.ದಾಸಣ್ಣವರ ನೇತೃತ್ವದ ತಂಡ ರಚಿಸಲಾಗಿತ್ತು. ದಾಜಿಬಾನಪೇಟೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ:
ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೇ ಹುಬ್ಬಳ್ಳಿಯ ದಿಡ್ಡಿ ಓಣಿ ನಿವಾಸಿ ರಮೇಶ ಕುಲಕರ್ಣಿ ಅವರನ್ನು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಅರವಿಂದನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ಬಂಧನ: ವೇಶ್ಯಾವಾಟಿಕೆ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸಂತೋಷನಗರದ ನಿವಾಸಿ ಅಬ್ದುಲ್ ರಜಾಕ್ ಎಂಬಾತನನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಿರುದ್ಧ ಪಿಐಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ವಿಶಾಲನಗರದಲ್ಲಿ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ನೆರವು ನೀಡುತ್ತಾರೆಂದು ಭಾವಿಸಿದ್ದೇನೆ’
ಬಿಜೆಪಿಗೆ ನಾನೇ ಟಾರ್ಗೆಟ್ ಆಗ್ತಿದ್ದೇನೆ! ನನ್ನ ಬಗ್ಗೆ ಅವರಿಗೆ ಈಗ ಅರ್ಥವಾಗಿದೆ ಎಂದ ಶೆಟ್ಟರ್
‘ಬಿಜೆಪಿಯ ಪಕ್ಷದ MPಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು’