ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಪಕ್ಷದಿಂದ ಚುನಾಯಿತರಾಗಿದ್ದ ಪ.ಪಂ ಅಧ್ಯಕ್ಷ ಡಾ. ಮಳಸಿದ್ದಪ್ಪ ಡಿ. ಮೇತ್ರಿ, ಸದಸ್ಯರಾದ ಪ್ರಕಾಶ ಮನಗೂಳಿ ಮತ್ತು ರಮೇಶ ಪಿರಗಾ ಅವರು ಜೆಡಿಎಸ್ ಪಕ್ಷದಲ್ಲಿ ಸೇರ್ಪಡೆಯಾದಿದ್ದಾರೆ.
ಮಂಗಳವಾರ ಸಂಜೆ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಅವರ ಸಮ್ಮುಖದಲ್ಲಿ ಈ ಮೂವರು ಪಕ್ಷಾಂತರ ಮಾಡಿದ್ದಾರೆ. ಈಗ ತಾಲೂಕಿನ ರಾಜಕೀಯದಲ್ಲಿ ಹೊಸ ತಿರುವು ಪಡೆದಿದೆ.
ಪ.ಪಂ ಅಧ್ಯಕ್ಷರ ವಿರುದ್ಧ ಆಡಳಿತ ಪಕ್ಷದ ಒಟ್ಟು 9 ಸದಸ್ಯರು ಅಕ್ಟೋಬರ್ 26ರಂದು ಅವಿಶ್ವಾಸ ಗೊತ್ತುವಳಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10ರಂದು ಅವಿಶ್ವಾಸ ನಿರ್ಣಯಕ್ಕೆ ವಿಶೇಷ ಸಾಮಾನ್ಯ ಸಭೆ ನಡೆಸಲು ನಿಗದಿಯಾಗಿದೆ. ಈ ಹಿನ್ನೆಲೆ ಈ ರಾಜಕೀಯ ಬೆಳವಣಿಗೆ ಮಹತ್ವ ಪಡೆದಿದೆ.
ಸೇರ್ಪಡೆ ಬಳಿಕ ಡಾ. ಮಳಸಿದ್ದಪ್ಪ ಮೇತ್ರಿ ಅವರು ಮಾತನಾಡಿದ್ದಾರೆ. ಪಟ್ಟಣದ ಅಭಿವೃದ್ಧಿ ಪರವಾಗಿಯೇ ಸಚಿವ ಶಿವಾನಂದ ಪಾಟೀಲ ಅವರಿಗೆ ಬೆಂಬಲ ನೀಡುತ್ತಿದ್ದೆವು. ಆದರೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತು ಜೆಡಿಎಸ್ ಪಕ್ಷ ಸೇರಿರುವೆವು.
ಮುಂದಿನ ದಿನಗಳಲ್ಲಿ ಪಟ್ಟಣದ ಜನತೆಯ ಆಶಯಗಳಿಗೆ ತಕ್ಕಂತೆ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಹಿಂದಿನ ರಾಜಕೀಯ ಸಂಗತಿಗಳಿಗೆ ಕ್ಷಮೆ ಕೋರುತ್ತೇನೆ. ಮತ್ತೆ ಅಂಥ ತಪ್ಪುಗಳನ್ನು ಪುನರಾವರ್ತಿಸುವುದಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಅಪ್ಪುಗೌಡ ಪಾಟೀಲ ಕೂಡ ಮಾತನಾಡಿದ್ದಾರೆ. ಹಿಂದಿನ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು, ಪಟ್ಟಣದ ಅಭಿವೃದ್ಧಿಗೆ ಇನ್ನುಮುಂದೂ ಹೆಚ್ಚಿನ ಒತ್ತು ನೀಡಬೇಕು. ಜನರ ವಿಶ್ವಾಸ ಬೆಳೆಸಿಕೊಳ್ಳುವುದು ಪ್ರಮುಖ ಎಂದು ಸಲಹೆ ನೀಡಿದರು.
ವರದಿ : ಲಾವಣ್ಯ ಅನಿಗೋಳ




