ಇಂದಿನಿಂದ ಮೂರು ದಿನ ಜಿಲ್ಲಾ ಪ್ರವಾಸ: ಅಭಿವೃದ್ಧಿಗೆ ಪ್ರಾಮುಖ್ಯತೆ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ತೆರಳಲಿದ್ದು ರಾಜ್ಯದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಆಹ್ವಾನ ಬಂದಲ್ಲಿ ದೆಹಲಿಗೆ ಹೋಗುತ್ತೇನೆ ಎಂದಾಸ್ ತಿಳಿಸಿದರು.

ಹುಬ್ಬಳ್ಳಿ ಘಟನೆಯ ತೀವ್ರವಾದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುತ್ತದೆ. ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡುವುದು ಅಕ್ಷಮ್ಯ ಅಪರಾಧ. ಕಾನೂನಿನ ಕ್ರಮ ಜರುಗಿಸಲಾಗುವುದು ಎಂದರು.

About The Author