Wednesday, November 12, 2025

Latest Posts

ಬಿಹಾರ ಚುನಾವಣೆಗೂ ಮುನ್ನ JDU ನಾಯಕ ಕುಟುಂಬದ ಮೂವರು ಶವವಾಗಿ ಪತ್ತೆ!

- Advertisement -

ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದೆ. ಈ ನಡುವೆ, ರಾಜ್ಯದ ರಾಜಕೀಯ ವಲಯವನ್ನು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ.

ಮೃತರನ್ನು ನಿರಂಜನ್ ಅವರ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್ ಹಾಗೂ ಮಗಳು ತನು ಪ್ರಿಯಾ ಎಂದು ಪೊಲೀಸರು ಗುರುತಿಸಿದ್ದಾರೆ. ಈ ದುರ್ಘಟನೆ ಕೇಹಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಯುರೋಪಿಯನ್ ಕಾಲೋನಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಮನೆಯಿಂದ ಮೂರು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿನ ನಿಖರ ಕಾರಣ ತಿಳಿಯಲು ವಿಧಿವಿಜ್ಞಾನ ತಜ್ಞರು ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಎಸ್‌ಡಿಪಿಒ ತಿಳಿಸಿದ್ದಾರೆ.

ಸ್ಥಳೀಯ ನಿವಾಸಿಗಳ ಪ್ರಕಾರ, ಮೃತ ನವೀನ್ ಕುಶ್ವಾಹ ಅವರು ಪ್ರದೇಶದಲ್ಲಿ ಬಹಳ ಜನಪ್ರಿಯರಾಗಿದ್ದರು. ಅವರು ಈ ಹಿಂದೆ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರೆಂದು ತಿಳಿದುಬಂದಿದೆ. ಈ ಘಟನೆ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss