KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ.
ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್ಆರ್ಟಿಸಿ ಬಸ್ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ ಬೈಕ್‌ನಲ್ಲಿ ಮೂವರು ಯುವಕರು ಬರುತ್ತಿದ್ದರು. ಈ ವೇಳೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಮತ್ತೊಂದೆಡೆ ಹಾಸನ ನಗರದ ಉದಯಗಿರಿ ಬಡಾವಣೆಯಲ್ಲಿ, ಆಫರ್‌ನಲ್ಲಿ ಶರ್ಟ್ ಖರೀದಿಸಲು ಯುವಕರು ಮುಗಿಬಿದ್ದಿದ್ರು. 1 ಸಾವಿರ ರೂಪಾಯಿಗೆ 20 ಶರ್ಟ್ ಖರೀದಿಸುವ ಆಸೆಗೆ, ಅರುಣ್ ಮೆನ್ಸ್ ವೇರ್ ಅಂಗಡಿ ಬಳಿ ಜಮಾಯಿಸಿದ್ರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರು, ಬ್ಯಾರಿಕೇಡನ್ನೇ ತಳ್ಳಿಕೊಂಡು ಹೋಗಿದ್ದಾರೆ. ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಾಠಿಚಾರ್ಜ್ ಮಾಡುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.