Thursday, January 16, 2025

Latest Posts

Jaggesh : ಜಗ್ಗೇಶ್ ಕತ್ತಲ್ಲೂ ಇದೆ ಹುಲಿ ಉಗುರಿನ ಲಾಕೆಟ್ ; ಅವರೇ ಒಪ್ಪಿಕೊಂಡಿದ್ರು

- Advertisement -

Film News : ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ (Varthur Santosh) ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾದರು. ಇದಾದ ಬಳಿಕ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅನೇಕ ಹೀರೋಗಳು ಕತ್ತಲ್ಲಿ ಹುಲಿ ಉಗುರು ಧರಿಸಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳಲಾಗುತ್ತಿದೆ. ಈಗ ಜಗ್ಗೇಶ್ ಕತ್ತಲ್ಲೂ ಹುಲಿ ಉಗುರು ಇದೆಯಂತೆ. ಸ್ವತಃ ಅವರೇ ಈ ವಿಚಾರವನ್ನು ಒಪ್ಪಿಕೊಂಡಿದ್ದರು.

ಖಾಸಗಿ ಸುದ್ದಿ ಸಂಸ್ಥೆ ಒಂದಕ್ಕೆ ಜಗ್ಗೆಶ್ ಅವರು ಸಂದರ್ಶನ ನಿಡಿದ್ದರು. ಈ ವೇಳೆ ಅವರು ಈ ಮಾಹಿತಿ ಹಂಚಿಕೊಂಡಿದ್ದರು. ‘ನನಗೆ 20 ವರ್ಷ ತುಂಬಿದಾಗ ಅಮ್ಮ ಈ ಲಾಕೆಟ್ ನೀಡಿದ್ದರು. ಮಗ ಹುಲಿ ಇದ್ದಾಂಗೆ ಇರಬೇಕು ಎಂದು ಅಮ್ಮ ಈ ಲಾಕೆಟ್ನ ಹಾಕಿದ್ದರು’ ಎಂದು ಸಂದರ್ಶನದಲ್ಲಿ ಜಗ್ಗೇಶ್ ಹೇಳಿದ್ದರು. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಅನೇಕರು ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.

ನಟ ದರ್ಶನ್ ಹುಲಿ ಉಗುರು ಧರಿಸಿದ್ದಾರೆ. ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎನ್ನಲಾಗಿದೆ. ಇವರುಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈಗ ಜಗ್ಗೇಶ್ ಅವರ ವಿರುದ್ಧವೂ ಅಪಸ್ವರ ಎದ್ದಿದೆ. ಅರಣ್ಯ ಇಲಾಖೆ ನೋಟಿಸ್ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ವರ್ತೂರು ಸಂತೋಷ್ ಅವರು ಬಿಗ್ ಬಾಸ್ ಮನೆಗೆ ತೆರಳಿದ್ದರು. ಅವರ ಕತ್ತಲ್ಲಿರುವ ಹುಲಿ ಉಗುರಿನ ಲಾಕೆಟ್ ಎಲ್ಲರ ಗಮನ ಸೆಳೆದಿತ್ತು. ಬಿಗ್ ಬಾಸ್ನಿಂದ ಅವರನ್ನು ಹೊರಕ್ಕೆ ಕರೆಸಿ ಬಂಧಿಸುವ ಕೆಲಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡಿದ್ದರು. ಇದಾದ ಬಳಿಕ ಸೆಲೆಬ್ರಿಟಿಗಳು ಹುಲಿ ಉಗುರಿನ ಚೈನ್ ಧರಿಸಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

Varthur Santhosh : ಕನ್ನಡದ ಬಿಗ್‌ಬಾಸ್ ಸೆಟ್‌ನಲ್ಲೇ “ಆ ಸ್ಪರ್ಧಿ” ಅರೆಸ್ಟ್

Prajwal deveraj; ಮತ್ತೊಂದು ಸವಾಲಿನ ಪಾತ್ರಕ್ಕೆ ಡೈನಾಮಿಕ್ ಪ್ರಿನ್ಸ್ ಸಿದ್ದ..!

Priya wariyar : ಪಡ್ಡೆಗಳ ಹೃದಯಕ್ಕೆ ಕಿಚ್ಚು ಹಚ್ಚಿದ ಮಲಯಾಳಿ ಬೆಡಗಿ..!

- Advertisement -

Latest Posts

Don't Miss